ಸಂಗ್ರಹ ಚಿತ್ರ 
ರಾಜ್ಯ

ಮಹದಾಯಿ ವಿವಾದ: ರೈತರ ಮೇಲಿದ್ದ 94 ಕೇಸ್'ಗಳು ವಾಪಸ್

ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಜೋಡನೆ ಯೋಜನೆ ಜಾರಿಗೆ ಆಘ್ರಹಿಸಿ ಹೋರಾಡ ನಡೆಸಿದ್ದ ನವಲಗುಂದ ತಾಲೂಕಿನ ರೈತರ ಮೇಲಿದ್ದ 94 ಮೊಕದ್ದಮೆಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ...

ಬೆಂಗಳೂರು: ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಜೋಡನೆ ಯೋಜನೆ ಜಾರಿಗೆ ಆಘ್ರಹಿಸಿ ಹೋರಾಡ ನಡೆಸಿದ್ದ ನವಲಗುಂದ ತಾಲೂಕಿನ ರೈತರ ಮೇಲಿದ್ದ 94 ಮೊಕದ್ದಮೆಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆಸ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಮಹದಾಯಿ ನದಿ ತಿರುವು ಮತ್ತು ಕಳಸಾ-ಬಂಡೂರಿ ನಾಲಾ ಜೋಡನೆ ಯೋಜನೆಗೆ ಆಗ್ರಹಿಸಿ 2015ರ ಆಗಸ್ಟ್ ನಿಂದ ಆರಂಭಗೊಂಡ ವಿವಿಧ ಹಂತದ ಚಳುವಳಿಯಲ್ಲಿ ರೈತರ ವಿರುದ್ಧ ಹಲವಾರು ಮೊಕದ್ದಮೆಗಳು ದಾಖಲಾಗಿದ್ದವು. ಇದೀಗ ರೈತರ ವಿರುದ್ಧವಿದ್ದ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರೈತರ ಮೇಲೆ ಹೂಡಲಾಗಿದ್ದ 72 ಪ್ರಕರಣಗಳು ಹಾಗೂ 22 ಇತರೆ ಗಂಭೀರ ಅಪರಾಧ ಪ್ರಕರಣಗಳು ಸೇರಿದಂದೆ ಒಟ್ಟು 94 ಪ್ರಕರಣಗಳನ್ನು ಕೈಬಿಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಮಂಡಲ ಜಂಟಿ ಅಧಿವೇಶನದಲ್ಲೂ ಈ ಬಗ್ಗೆ ಸಾಕಷ್ಟು ಚರ್ಚೆಯಾದ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಆದರೆ, ವಕೀಲರು ನಡೆಸಿದ್ದ ಚಳುವಳಿಯ 74 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಕುರಿತಂತೆ ಯಾವುದೇ ತೀರ್ಮಾನಗಳನ್ನು ಕೈಗೊಳ್ಳಲಾಗಿಲ್ಲ. ಆ ಪ್ರಕರಣಗಳ ವಿಚಾರಣೆ ಮುಂದುವರಿಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ