ಸಂಗ್ರಹ ಚಿತ್ರ 
ರಾಜ್ಯ

ಮೌಲ್ಯಮಾಪನ ಬಹಿಷ್ಕರಿಸುವ ಪಿಯುಸಿ ಉಪನ್ಯಾಸಕರಿಗೆ ಜೈಲು ಶಿಕ್ಷೆ

ಮೌಲ್ಯಮಾಪನವನ್ನು ಬಹಿಷ್ಕರಿಸುವ ಪಿಯು ಕಾಲೇಜು ಉಪನ್ಯಾಸಕರುಗಳಿಗೆ ಆರು ತಿಂಗಳು ಜೈಲು ಶಿಕ್ಷೆ ಮತ್ತು 1 ಸಾವಿರು ರೂ ದಂಡ ವಿಧಿಸುವ..

ಬೆಂಗಳೂರು: ಮೌಲ್ಯಮಾಪನವನ್ನು ಬಹಿಷ್ಕರಿಸುವ ಪಿಯು ಕಾಲೇಜು ಉಪನ್ಯಾಸಕರುಗಳಿಗೆ ಆರು ತಿಂಗಳು ಜೈಲು ಶಿಕ್ಷೆ ಮತ್ತು 1 ಸಾವಿರು ರೂ ದಂಡ ವಿಧಿಸುವ 2017ರ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ.

ಮೌಲ್ಯಮಾಪನ ಬಹಿಷ್ಕರಿಸುವ ಸಂದರ್ಭದಲ್ಲಿ ಶಿಕ್ಷಕರನ್ನು ಬೆಂಬಲಿಸುವ ಜನಪ್ರತಿನಿಧಿಗಳು ಮತ್ತು ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳಿಗೆ ಜೈಲು ಸಜೆ ವಿಧಿಸುವ ಅಂಶವನ್ನು ತಿದ್ದುಪಡಿ ವಿಧೇಯಕ ಒಳಗೊಂಡಿದೆ.

ಬೇಡಿಕೆಗಳ ಈಡೇರಿಕೆಗಾಗಿ ಶಿಕ್ಷಕರು, ಉಪನ್ಯಾಸಕರು ಪರೀಕ್ಷೆ ಮತ್ತು ಮೌಲ್ಯಮಾಪನದ ಸಂದರ್ಭದಲ್ಲಿ ಕರ್ತವ್ಯ ಬಹಿಷ್ಕರಿಸಿ ಹೋರಾಟಕ್ಕಿಳಿಯುವುದನ್ನು ತಡೆಯಲು ರಾಜ್ಯ ಸರ್ಕಾರ ಸಿದ್ದಪಡಿಸಿರುವ "ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕ 2017'ಕ್ಕೆ ರಾಜ್ಯ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು ಮತ್ತು ಉಪನ್ಯಾಸಕರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಮಂಗಳವಾರ ಮುಕ್ತಾಯಗೊಂಡ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯರ ವಿರೋಧದ ಹಿನ್ನೆಲೆಯಲ್ಲಿ ಈ ವಿಧೇಯಕ ಮಂಡನೆ ಮುಂದೂಡಲ್ಪಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಮುಂದಿನ ಅಧಿವೇಶನದಲ್ಲೂ ಈ ವಿಧೇಯಕ ಮಂಡಿಸಬಾರದು. ಸೌಹಾರ್ದಯುತ ಮಾತುಕತೆ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಆಗ್ರಹಿಸಿದ್ದಾರೆ.

ಇದು ಶಿಕ್ಷಕರ ಹೋರಾಟದ ದಮನನೀತಿಯಾಗಿದ್ದು, ವೇತನ ತಾರತಮ್ಯ ಸೇರಿದಂತೆ ತಮಗಾಗಿರುವ ಅನ್ಯಾಯ ಸರಿಪಡಿಸುವಂತೆ 1998ರಿಂದ ಪಿಯು ಕಾಲೇಜು ಪ್ರಾಚಾರ್ಯರು ಮತ್ತು ಉಪನ್ಯಾಸಕರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಹಿಂದೆ ಇದೇ ವಿಚಾರಕ್ಕಾಗಿ ಮೌಲ್ಯಮಾಪನ ಬಹಿಷ್ಕರಿಸಿ ಹೋರಾಟಕ್ಕಿಳಿದಾಗ "ಎಸ್ಮಾ' ಜಾರಿ ಮಾಡಿ ಸರ್ಕಾರ ದಮನ ನೀತಿ ಅನುಸರಿಸಿತ್ತು. ಕಳೆದ ವರ್ಷ ಕೂಡ ಮೌಲ್ಯಮಾಪನ ಬಹಿಷ್ಕರಿಸಿದಾಗ ಸುಳ್ಳು ಭರವಸೆ ನೀಡಿ ಮೌಲ್ಯಮಾಪನಕ್ಕೆ ಹಾಜರಾಗುವಂತೆ ಮಾಡ ಲಾಗಿತ್ತು ಎಂದು ಒಳಗೊಂಡಿದೆ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ