ರೈತ ಮುಖಂಡರ ಮನವಿ ಸ್ವೀಕರಿಸುತ್ತಿರುವ ಸಿಎಂ 
ರಾಜ್ಯ

ರೈತರ ಸಾಲಮನ್ನಾ ಮಾಡುವ ಮೂಲಕ ಬಿಜೆಪಿಗೆ ಟಾಂಗ್ ಕೊಡಲು ಸಿದ್ದರಾಮಯ್ಯ ಚಿಂತನೆ?

ಸುದೀರ್ಘ ಸಮಯದಿಂದ ಬರಪೀಡಿತ ಪ್ರದೇಶದ ರೈತರ ಸಾಲ ಮನ್ನಾ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ಹರಿಹಾಯುತ್ತಲೇ ಬಂದಿದೆ. ...

ಬೆಂಗಳೂರು:  ಸುದೀರ್ಘ ಸಮಯದಿಂದ ಬರಪೀಡಿತ ಪ್ರದೇಶದ ರೈತರ ಸಾಲ ಮನ್ನಾ  ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ಹರಿಹಾಯುತ್ತಲೇ ಬಂದಿದೆ. ಹೀಗಾಗಿ  ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡಿರುವ ಸಿಎಂ  ರೈತರ ಸಾಲಮನ್ನಾ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ ಶೇ. 50 ರಷ್ಟು ಸಾಲ ಮನ್ನಾ ಮಾಡಲು ಸಿದ್ದರಾಮಯ್ಯ ಆಸಕ್ತಿ ವಹಿಸಿದ್ದಾರೆ, ಹೀಗಾಗಿ ತಾವು ಮಂಡಿಸಲಿರುವ 12ನೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಯಾವುದೇ ನೆರವಿಗೆ ಕಾಯದೇ ರಾಜ್ಯವೊಂದೇ ರೈತರ ಸಾಲ ಮನ್ನಾಗೆ ಚಿಂತನೆ ಮಾಡುತ್ತಿದೆ ಎನ್ನಲಾಗಿದೆ.

ರಾಜ್ಯದ ರೈತರು ವಾಣಿಜ್ಯ ಮತ್ತು ಸಹಕಾರ ಬ್ಯಾಂಕುಗಳಲ್ಲಿ 52,200 ಕೋಟಿ ರೂ. ಸಾಲ ಮಾಡಿದ್ದಾರೆ. ಸಹಕಾರ ಬ್ಯಾಂಕುಗಳು ಕೊಟ್ಟಿರುವುದು 10 ಸಾವಿರ ಕೋಟಿ ರೂ. ಆದರೆ, ವಾಣಿಜ್ಯ ಬ್ಯಾಂಕುಗಳು 42,200 ಕೋಟಿ ರೂ. ಕೊಟ್ಟಿವೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದರೆ ಶೇ.19ರಷ್ಟು ರೈತರಿಗೆ ಮಾತ್ರ ಉಪಯೋಗವಾಗುತ್ತದೆ. ಕೇಂದ್ರ ಸರ್ಕಾರವೂ ಅರ್ಧದಷ್ಟಾದರೂ ಮನ್ನಾ ಮಾಡಿದರೆ ಶೇ.100ಕ್ಕೆ 100 ರಷ್ಟು ರೈತರಿಗೆ ಉಪಯೋಗವಾಗುತ್ತದೆ.

ವಿಧಾನಸಭೆ ಚುನಾವಣೆಗೆ ಇನ್ನು 14 ತಿಂಗಳು ಮಾತ್ರ ಬಾಕಿ ಉಳಿದಿದೆ.  ಹೀಗಾಗಿ ಚುನಾವಣೆಗೆ ಪೂರಕವಾಗುವಂತ ಬಜೆಟ್ ಮಂಡಿಸಲು ಸಿಎಂ ತಯಾರಿ ನಡೆಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಇಲಾಖೆಗೆ ರೈತರ ಸಾಲದ ಅಂದಾಜು ವೆಚ್ಚ ಹಾಗೂ ಮಾದರಿಯಾದ ರೈತರ ಸಾಲಮನ್ನ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

20 ಸಾವಿರದಿಂದ 25 ಸಾವಿರ ಸಾಲ ಪಡೆದಿರುವ ರೈತರ ಸಾಲಮನ್ನ ಮಾಡುವ ಮೂಲಕ ಬಿಜೆಪಿಗೆ ಟಾಂಗ್ ಕೊಡಲು ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಕಷ್ಟದಲ್ಲಿರುವ ರೈತರನ್ನು ಕಡೆಗಣಿಸಿದೆ ಎಂಬುದನ್ನು ಜನರಿಗೆ ತೋರಿಸಲು ಸಿದ್ಧತೆ ನಡೆಸುತ್ತಿದ್ದಾರೆ, ಇದನ್ನೆ ಮುಂದಿನ ವಿಧಾನಸಭೆ ಚುನಾವಣೆಗೆ ಅಸ್ತ್ರವನ್ನಾಗಿ ಪ್ರಯೋಗಿಸಲು ಹವಣಿಸುತ್ತಿದ್ದಾರೆ.

ಇನ್ನೂ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿ ಬಿಡಲಿ, ರಾಜ್ಯ ಸರ್ಕಾರ ತಕ್ಷಣ ಸಹಕಾರ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ರೈತ ಮುಖಂಡರು ಮುಖ್ಯಮಂತ್ರಿಗೆ ಒಕ್ಕೊರಲ ಬೇಡಿಕೆ ಸಲ್ಲಿಸಿದರು.

ವಿಧಾನಸೌಧದಲ್ಲಿ ಗುರುವಾರ ಬಜೆಟ್‌ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು, ರಾಜ್ಯದಲ್ಲಿ ಸತತ ಬರದಿಂದ ರೈತ ಸಮುದಾಯ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಮಾಡಲಿ ಎಂದು ಕಾಯುವುದಕ್ಕಿಂತ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು. ಸಾಲಮನ್ನಾ ಜತೆಗೆ ಹೊಸ ಸಾಲದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಬಜೆಟ್‌ನಲ್ಲಿ ಕೃಷಿ ಮತ್ತು ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಡಬೇಕು. ರೈತರ ಆರ್ಥಿಕ ಸ್ಥಿತಿ ಉತ್ತಮ ಪಡಿಸುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್‌ ರೂಪಿಸಬೇಕೆಂದು  ರೈತ ಮುಖಂಡ ಕುರಬೂರು ಶಾಂತಕುಮಾರ್ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಸಿಎಂ ರೈತರ ನೆರವಿಗೆ ಬರುತ್ತಾರೆ ಎಂಬ ಆಶಯವನ್ನು ಅವರು ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!