ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾರು ಚಾಲಕನ ಅಪಹರಣ, ಚಾಕುವಿನಿಂದ ಇರಿದು ಪರಾರಿಯಾದ ದುಷ್ಕರ್ಮಿಗಳು

ಕಾರು ಚಾಲಕನೊಬ್ಬನನ್ನು ಅಪಹರಿಸಿರುವ ದುಷ್ಕರ್ಮಿಗಳು ನಂತರ ಆತನಿಕೆ ಚಾಕುವಿನಿಂದ ಇರಿದು ಚಾಕುವಿನಿಂದ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ...

ಬೆಂಗಳೂರು: ಕಾರು ಚಾಲಕನೊಬ್ಬನನ್ನು ಅಪಹರಿಸಿರುವ ದುಷ್ಕರ್ಮಿಗಳು ನಂತರ ಆತನಿಕೆ ಚಾಕುವಿನಿಂದ ಇರಿದು ಚಾಕುವಿನಿಂದ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಅವಿನಾಶ್ (27) ಸಂತ್ರಸ್ತ ಯುವಕನಾಗಿದ್ದು, ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಂಪೇಗೌಡ ಆರ್ಚ್ ಬಳಿ ಕಳೆದ ರಾತ್ರಿ 9.30ರ ಸುಮಾರಿಗೆ ಅವಿನಾಶ್ ಅವರು ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದಿರುವ ದುಷ್ಕರ್ಮಿಗಳು ಅವಿನಾಶ್ ರನ್ನು ಅಪಹರಿಸಿದ್ದಾರೆ.

ನಂತರ ಬೆಳ್ಳೂರು ಕ್ರಾಸ್ ಟೋಲ್ ಗೇಟ್ ಬಳಿ ಕರೆದುಕೊಂಡು ಹೋಗಿರುವ ದುಷ್ಕರ್ಮಿಗಳು ಅವಿನಾಶ್ ಅವರಿಗೆ ಹಿಗ್ಗಾಮುಗ್ಗಾ ಥಳಿಸಲು ಆರಂಭಿಸಿದ್ದಾರೆ. ಈ ವೇಳೆ ಸ್ಥಳೀಯ ದಾರಿಹೋಕರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಅವಿನಾಶ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾರೆ.
 
ಈ ವೇಳೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಪಹರಣ ಹಾಗೂ ಕೊಲೆ ಯತ್ನಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಆದರೆ, ಹಣಕ್ಕಾಗಿ ಕೃತ್ಯವೆಸಗಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್