ಧಾರವಾಡ: ಅಂತ್ಯ ಸಂಸ್ಕಾರಕ್ಕೆ ಕೊಂಡೊಯ್ಯುತ್ತಿದ್ದಾಗ ಚಟ್ಟದ ಮೇಲಿಂದ ಎದ್ದು ಕೂತ ಬಾಲಕ
ಮೃತ ಪಟ್ಟಿದ್ದಾನೆ ಎಂದು ತಿಳಿದು ಅತ್ಯಸಂಸ್ಕಾರಕ್ಕೆ ಕೊಂಡೊಯ್ಯುವಾಗ ಬಾಲಕನೊಬ್ಬ ಎದ್ದು ಕುಳಿತ ಅಚ್ಚರಿಯ ಘಟನೆ ಧಾರವಾಡ ತಾಲೂಕಿನ...
ಧಾರವಾಡ: ಮೃತ ಪಟ್ಟಿದ್ದಾನೆ ಎಂದು ತಿಳಿದು ಅತ್ಯಸಂಸ್ಕಾರಕ್ಕೆ ಕೊಂಡೊಯ್ಯುವಾಗ ಬಾಲಕನೊಬ್ಬ ಎದ್ದು ಕುಳಿತ ಅಚ್ಚರಿಯ ಘಟನೆ ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ನಡೆದಿದೆ.
16 ವರ್ಷದ ಕುಮಾರ್ ಮರಡಿ ಅಚ್ಚರಿಯ ರೀತಿಯಲ್ಲಿ ಬದುಕುಳಿದ ಬಾಲಕ. ಕೆಲವು ದಿನಗಳ ಹಿಂದೆ ಕುಮಾರ್ ಮರಡಿಗೆ ಬೀದಿ ನಾಯಿಯೊಂದು ಕಚ್ಚಿತ್ತು. ಸೂಕ್ತ ಚಿಕಿತ್ಸೆ ಪಡೆಯದ ಕಾರಣ ಗಾಯ ನಂಜಾಗಿ ಬಾಲಕ ಮೂರ್ಛೆ ಹೋಗಿದ್ದ. ನಂತರ ಪಾಲಕರು ಕುಮಾರ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ಕುಮಾರ್ಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಕುಮಾರ್ ಚಿಕಿತ್ಸೆಗೆ ಸ್ಪಂದಿಸದ ಕಾರಣ ವೈದ್ಯರು ಬಾಲಕನನ್ನು ಮನೆಗೆ ಕೊಂಡೊಯ್ಯುವಂತೆ ತಿಳಿಸಿದ್ದರು. ಬಾಲಕನ ಉಸಿರಾಟ ಮತ್ತು ನಾಡಿ ಮಿಡಿತ ನಿಂತಿರುವುದನ್ನು ಗಮನಿಸಿದ ಪಾಲಕರು ಕುಮಾರ್ ಮೃತಪಟ್ಟಿದ್ದಾನೆ ಎಂದು ನಿರ್ಧರಿಸಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.
ಶನಿವಾರ ರಾತ್ರಿ ಕುಮಾರ್ ದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಕುಮಾರ್ ಉಸಿರಾಡಲು ಪ್ರಾರಂಭಿಸಿದ್ದಾನೆ. ಕೂಡಲೇ ಪಾಲಕರು ಮತ್ತು ಸಂಬಂಧಿಕರು ಬಾಲಕನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಕುಮಾರ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ವರ್ತನೆ ಇಡೀ ಗ್ರಾಮಸ್ಥರಿಗೆ ಶಾಕ್ ನೀಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.