ಬನ್ನೇರುಘಟ್ಟ: ತಾಂತ್ರಿಕ ದೋಷದಿಂದಾಗಿ ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಬನ್ನೇರುಘಟ್ಟದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಅನೇಕಲ್ ತಾಲೂಕಿನ ಬನ್ನೇರುಘಟ್ಟದ ಬೇಗೆಹಳ್ಳಿಯಲ್ಲಿ ಬಳಿ ಸಂಜೆ 5 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು ಪೈಲಟ್ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಐಎಎಫ್ ಹೆಲಿಕಾಪ್ಟರ್ ನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದು ಎಲ್ಲರು ಸುರಕ್ಷಿತವಾಗಿದ್ದಾರೆ. ತಾಂತ್ರಿಕ ಸಮಸ್ಯೆ ನಿವಾರಣೆ ಬಳಿಕ ಹೆಚ್ಎಎಲ್ ಗೆ ಹೆಲಿಕಾಪ್ಟರ್ ತೆರಳಿತು.