ಮೈ.ಚ ಜಯದೇವ್ 
ರಾಜ್ಯ

ಆರ್ ಎಸ್ಎಸ್ ನ ಹಿರಿಯ ಪ್ರಚಾರಕ ಮೈ.ಚ. ಜಯದೇವ್ ನಿಧನ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)ನ ಹಿರಿಯ ಪ್ರಚಾರಕ ಮೈ.ಚ ಜಯದೇವ್ (83) ಫೆ.20 ರಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)ನ ಹಿರಿಯ ಪ್ರಚಾರಕ ಮೈ.ಚ ಜಯದೇವ್ (83) ಫೆ.20 ರಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 
ವಯೋಸಹಜ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಯದೇವ್ ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪಾರ್ಥಿವ ಶರೀರವನ್ನು ಆರ್ ಎಸ್ಎಸ್ ನ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಅಂತಿಮ ದರ್ಶನಕ್ಕೆ ಇರಿಸಿದ ನಂತರ ಚಾಮರಾಜ ಪೇಟೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 
ಫೆಬ್ರವರಿ 9, 1934ರಲ್ಲಿ ಮೈಸೂರಿನಲ್ಲಿ ಜನಿಸಿದ್ದ ಮೈಸೂರು ಚನ್ನಬಸಪ್ಪ ಜಯದೇವ (ಮೈ.ಚ. ಜಯದೇವ್)  ಬಿ.ಎಸ್ಸಿ. ಪದವಿ ಪೂರೈಸಿದ ನಂತರ ಕಾನೂನು ವ್ಯಾಸಂಗ ಮಾಡಿದ್ದರು. ಬೆಂಗಳೂರಿನ ಪ್ರತಿಷ್ಠಿತ HMT- Hindustan Garage Motors ನಲ್ಲಿಯೂ ಮ್ಯಾನೇಜರ್ ಆಗಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಜಯದೇವ್ ನಂತರದ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರಧಾರೆಯತ್ತ ಆಕರ್ಷಿತರಾಗಿ  ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. 
ಮೈ.ಚ ಜಯದೇವ್ ಅವರು ರಾಷ್ಟ್ರೋತ್ಥಾನ ಪರಿಷತ್‌ನ ಸ್ಥಾಪನೆಯಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದರು.  1965ರಿಂದ 1995ರ ತನಕ ಮೂರು ದಶಕಗಳ ಕಾಲ ರಾಷ್ಟ್ರೋತ್ಥಾನ ಪರಿಷತ್‌ನ ಜನರಲ್ ಮ್ಯಾನೇಜರ್ ಆಗಿ ಮೈ.ಚ ಜಯದೇವ್ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!