ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಪ್ರೇಮಲತಾ ದಿವಾಕರ್ 
ರಾಜ್ಯ

ರಾಘವೇಶ್ವರ ಶ್ರೀಗೆ ಬ್ಲ್ಯಾಕ್ ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಸಿಐಡಿ ಕ್ಲೀನ್ ಚಿಟ್

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪ್ರೇಮಲತಾ ದಿವಾಕರ್ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪ್ರೇಮಲತಾ ದಿವಾಕರ್ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.

ಬ್ಲ್ಯಾಕ್ ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

ರಾಘವೇಶ್ವರ ಶ್ರೀಗಳಿಗೆ ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಹಾಗೂ ಪತಿ ದಿವಾಕರ್ ಅವರು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಆರೋಪಿಸಿ 2014ರ ಆ.26ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ರಾಮಕಥಾ ಗಾಯಕಿ ಪ್ರೇಮಲತಾ, ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರುದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್ ನಲ್ಲಿ ಸಿಐಡಿ ಉಲ್ಲೇಖಿಸಿದೆ.

ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ  ದಂಪತಿ ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ರಾಘವೇಶ್ವರ ಶ್ರೀ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ನಲ್ಲಿ ಬ್ಲಾಕ್‍ಮೇಲ್ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ 2,500 ಕೋಟಿ ಅಬಕಾರಿ ಹಗರಣ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಮಹಿಳಾ ಅಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಉಡುಪಿ: ಬಸ್ - ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು

SIR ಆತಂಕ; ಪಶ್ಚಿಮ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!

SCROLL FOR NEXT