ಪಾಸ್ ಪೋರ್ಟ್ ಸೇವಾ ಕೇಂದ್ರ 
ರಾಜ್ಯ

ಮಾರ್ಚ್ ನಿಂದ ಹೊಸ ಪೋಸ್ಟ್ ಆಫೀಸ್ ಪಾಸ್ ಪೋರ್ಟ್ ಸೇವಾ ಕೇಂದ್ರಗಳು ಪ್ರಾರಂಭ

ಮಾರ್ಚ್ ತಿಂಗಳಾಂತ್ಯಕ್ಕೆ ನಾಲ್ಕು ಹೊಸ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ. ಈ ಮೂಲಕ ಇನ್ನು ಮುಂದೆ ಪಾಸ್ ಪೋರ್ಟ್ ಗಳಿಗಾಗಿ ಅರ್ಜಿ ಸಲ್ಲಿಸುವುದು ಮತ್ತಷ್ಟು ಸುಲಭವಾಗಲಿದೆ.

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ಹೆಚ್ಚುವರಿ ಪಾಸ್ ಪೋರ್ಟ್ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ವಿದೇಶಾಂಗ ಇಲಾಖೆ ಅನುಮತಿ ನೀಡಿದ್ದು, ಮಾರ್ಚ್ ತಿಂಗಳಾಂತ್ಯಕ್ಕೆ ನಾಲ್ಕು ಹೊಸ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ. ಈ ಮೂಲಕ ಇನ್ನು ಮುಂದೆ ಪಾಸ್ ಪೋರ್ಟ್ ಗಳಿಗಾಗಿ ಅರ್ಜಿ ಸಲ್ಲಿಸುವುದು ಮತ್ತಷ್ಟು ಸುಲಭವಾಗಲಿದೆ. 
ದಾವಣಗೆರೆ, ಬೆಳಗಾವಿ, ಹಾಸನ, ಕಲಬುರ್ಗಿ ಜಿಲ್ಲೆಗಳಲ್ಲಿ ಪೋಸ್ಟ್ ಆಫೀಸ್ ಪಾಸ್ ಪೋರ್ಟ್ ಕೇಂದ್ರಗಳು ಪ್ರಾರಂಭವಾಗಲಿದ್ದು, ಮೈಸೂರಿನಲ್ಲಿ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಕೇಂದ್ರ ಇರಲಿದೆ. 
ಈ ಬಗ್ಗೆ ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿ ಪಿಎಸ್ ಕರ್ತಿಕೇಯನ್ ಮಾಹಿತಿ ನೀಡಿದ್ದು, ಫೆಬ್ರವರಿ ತಿಂಗಳಲ್ಲೇ ಪಾಸ್ ಪೋರ್ಟ್ ಕೇಂದ್ರಗಳು ಕಾರ್ಯಾರಂಭ ಮಾಡಬೇಕಿತ್ತು. ಆದರೆ ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ವಿಳಂಬವಾದ್ದರಿಂದ ಪಾಸ್ ಪೋರ್ಟ್ ಕೇಂದ್ರಗಳ ಕಾರ್ಯಾರಂಭವೂ ವಿಳಂಬವಾಗಿದ್ದು, ಆದರೆ ಮಾರ್ಚ್ ತಿಂಗಳಾಂತ್ಯಕ್ಕೆ ಕಾರ್ಯಾರಂಭ ಮಾಡಲಿವೆ ಎಂದು ಹೇಳಿದ್ದಾರೆ. 
ಪಾಸ್ ಪೋರ್ಟ್ ಕೇಂದ್ರಗಳ ಕಾರ್ಯನಿರ್ವಹಣೆಗೆ ಸೂಕ್ತ ಜಾಗಗಳನ್ನು ಹುಡುಕಲಾಗುತ್ತಿದೆ. ಪ್ರಾರಂಭದ ಹಂತದಲ್ಲಿ ಕ್ಯಾಂಪ್ ಮೋಡ್ ನಲ್ಲಿ ಪಾಸ್ ಪೋರ್ಟ್ ಕೇಂದ್ರಗಳು ಕಾರ್ಯನಿರ್ವಹಿಸಲಿವೆ, ಎಲ್ಲವೂ ಸರಿಯಾದ ಬಳಿಕ ಪಾಸ್ ಪೋರ್ಟ್ ಕೇಂದ್ರಗಳಲ್ಲೇ ಎಲ್ಲಾ ಪ್ರಕ್ರಿಯೆಗಳೂ ನಡೆಯಲಿದ್ದು, ಪಾಸ್ ಪೋರ್ಟ್ ಪಡೆಯುವುದು ಮತ್ತಷ್ಟು ಸುಲಭವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT