ನೃಪತುಂಗ ರಸ್ತೆ 
ರಾಜ್ಯ

ಬೆಂಗಳೂರು: 2 ತಿಂಗಳ ಕಾಲ ನೃಪತುಂಗ ರಸ್ತೆಯಲ್ಲಿ ಸಂಚಾರ ಬಂದ್

ಫೆಬ್ರವರಿ 26 ರಿಂದ ಸುಮಾರು 2 ತಿಂಗಳ ಕಾಲ ನೃಪತುಂಗ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ....

ಬೆಂಗಳೂರು: ಫೆಬ್ರವರಿ 26 ರಿಂದ ಸುಮಾರು 2 ತಿಂಗಳ ಕಾಲ ನೃಪತುಂಗ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಆದರೆ ಬಿಎಂಟಿಸಿ ಬಸ್ ಮತ್ತು ಸರ್ಕಾರಿ ಅಧಿಕಾರಿಗಳ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಕೆ. ಆರ್ ಸರ್ಕಲ್ ನಿಂದ ಕಬ್ಬನ್ ಪಾರ್ಕ್ ಮಾರ್ಗವಾಗಿ ಹಡ್ಸನ್ ಸರ್ಕಲ್ ಗೆ ಉಳಿದ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ಬೆಂಗಳೂರಿನ 7 ಪ್ರಮುಖ ರಸ್ತೆಗಳಲ್ಲಿ ಬಿಬಿಎಂಪಿ ಮೊದಲನೇ ಹಂತದ ಟೆಂಡರ್ ಶ್ಯೂರ್ ಯೋಜನೆ ಸಂಬಂಧ ಅಂತಿಮ ಹಂತದ ಕಾಮಗಾರಿಗಳನ್ನು ಬಿಬಿಎಂಪಿ ಆರಂಭಿಸಿದೆ.

ನೃಪತುಂಗ ರಸ್ತೆ 2ನೇ ಹಂತದ ಕಾಮಗಾರಿಗೆ ಒಳಪಟ್ಟಿದೆ.  ಈ ರಸ್ತೆಯಲ್ಲಿ ಯಾವಾಗಲು ಸಂಟಾರ ದಟ್ಟಣೆಯಿದ್ದು ಜನನಿಬಿಡ ಪ್ರದೇಶವಾಗಿದೆ. ಪೂರ್ವ  ಹಾಗೂ ದಕ್ಷಿಣ ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಸೋಮವಾರದಿಂದ ಕೆಲಸ ಆರಂಭವಾಗಲಿದ್ದು, ಒಂದೂವರೆ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ನೃಪತುಂಗ ರಸ್ತೆಯನ್ನು ಎರಡು ಭಾಗವಾಗಿ ವಿಭಾಗ ಮಾಡಿ, ಒಂದು ಭಾಗದ ರಸ್ತೆಯಲ್ಲಿ ಬಿಎಂಟಿಸಿ ಬಸ್ ಮತ್ತು ಸರ್ಕಾರಿ ಅಧಿಕಾಗಿಳ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗುವುದು. ದ್ವಿಚಕ್ರ ವಾಹನ ಹಾಗೂ ಕಾರು ಮತ್ತು ಆಟೋ ರಿಕ್ಷಾ ಗಳು ಕೆಆರ್ ಸರ್ಕಲ್ ನಿಂದ ಕಬ್ಬನ್ ಪಾರ್ಕ್ ಒಳಗಿಂದ( ಸೆಂಚುರಿ ಕ್ಲಬ್ ಸೆಂಟ್ರಲ್ ಲೈಬ್ರರಿ ಮುಖಾಂತರ) ಹಡ್ಸನ್ ಸರ್ಕಲ್ ತಲುಪಲು ವ್ಯವಸ್ಥೆ ಮಾಡಲಾಗುವುದು, ಭಾನುವಾರ ಕೂಡ ಕಬ್ಬನ್ ಪಾರ್ಕ್ ನಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇಲ್ಲಿಯವರೆಗೆ ಕಬ್ಬನ್ ಪಾರ್ಕ್ ನಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದ ವಕೀಲರಿಗೆ ಬನ್ನಪ್ಪ ಪಾರ್ಕ್ ನಲ್ಲಿ ಪಾರ್ಕಿಂಗ್ ಮಾಡುವಂತೆ ಸೂಚಿಸಲಾಗುವುದು  ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ