ಸಂಗ್ರಹ ಚಿತ್ರ 
ರಾಜ್ಯ

ಗಗನಸಖಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರ ಬಂಧನ!

ಕುಡಿದ ಮತ್ತಿನಲ್ಲಿ ಗಗನ ಸಖಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪದ ಮೇರೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಗಗನ ಸಖಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪದ ಮೇರೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಕಳೆದ ಭಾನುವಾರ ಪ್ರಕರಣ ನಡೆದಿದ್ದಾದರೂ, ಮಂಗಳವಾರ ಪ್ರಕರಣ ಬಯಲಾಗಿದೆ. ಮೂಲಗಳ ಪ್ರಕಾರ ನಾಗಾಲ್ಯಾಂಡ್ ಮೂಲಕ ಅಜಯ್ ಕುಮಾರ್ ಮತ್ತು ಕಲಾ ಪಂಕಜ್ ಎಂಬ ಯುವಕರು ಕಂಠಪೂರ್ತಿ ಕುಡಿದು ವಿಮಾನ  ಹತ್ತಿದ್ದಾರೆ. ಬಳಿಕ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಗಗನ ಸಖಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ವಿಮಾನ ಚಲಿಸುತ್ತಿರುವಾಗಲೇ ಮೆನುಕಾರ್ಡ್ ತರುವಂತೆ ಹೇಳಿ ಗಗನ ಸಖಿಯರನ್ನು ಛೇಡಿಸಿದ್ದಾರೆ. ಅಲ್ಲದೆ  ಜೋರಾಗಿ ಕೂಗಾಡುತ್ತಾ ವಿಮಾನದಲ್ಲಿದ್ದ ಪೈಲಟ್ ಗಳ ಏಕಾಗ್ರತೆಗೆ ಭಂಗ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

ಅಜಯ್ ಕುಮಾರ್ ಮತ್ತು ಕಲಾ ಪಂಕಜ್ ಮದುವೆ ನಿಮಿತ್ತ ಹಾಸನಕ್ಕೆ ತೆರಳಬೇಕಿತ್ತು. ಹೀಗಾಗಿ ಅವರು ಗುವಾಹತಿಯಿಂದ ಬೆಂಗಳೂರಿಗೆ ಏರ್ ಎಷ್ಯಾ ವಿಮಾನ ಸಂಖ್ಯೆ ಐ5 1983 ವಿಮಾನದಲ್ಲಿ ಆಗಮಿಸುತ್ತಿದ್ದರು. ಈ ವೇಳೆ  ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ವಿಮಾನದ ಸಿಬ್ಬಂದಿ ವಾಯುಗೋಪುರಕ್ಕೆ ಮಾಹಿತಿ ರವಾನಿಸಿದ್ದು, ವಿಮಾನ ಕೆಂಪೇಗೌಡ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ  ಕರ್ನಾಟಕ ಪೊಲೀಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಯುವಕರ ವಿರುದ್ಧ ಏರ್ ಏಷ್ಯಾ ದೂರು ಕೂಡ ದಾಖಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ