ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷ ಆಚರಣೆಗೆ ಸೇರಿದ್ದ ಜನ 
ರಾಜ್ಯ

ಬೆಂಗಳೂರು: ಹೊಸ ವರ್ಷ ಆಚರಣೆ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಪೊಲೀಸರಿಂದ ಕೇಸ್

ನಗರದ ಪ್ರತಿಷ್ಠಿತ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಕೆಲವು ಯುವಕರು ಕುಡಿದ ಅಮಲಿನಲ್ಲಿ...

ಬೆಂಗಳೂರು: ನಗರದ ಪ್ರತಿಷ್ಠಿತ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಕೆಲವು ಯುವಕರು ಕುಡಿದ ಅಮಲಿನಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.
ಶಂಕಿತ ಆರೋಪಿಗಳ ಪತ್ತೆಗಾಗಿ ಪೊಲೀಸರು ಈಗಾಗಲೇ ಸಿಸಿಟಿವ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ನಂತರ ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರು ದೂರು ನೀಡಿಲ್ಲ ಎಂದು ಹೇಳಿದ್ದಾರೆ.
ಇನ್ನು ಹೊಸ ವರ್ಷಾಚರಣೆ ದಿನ ಭದ್ರತೆಗಾಗಿ ಸುಮಾರು 1500 ಪೊಲೀಸರು ಹಾಗೂ 25ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದ್ದರೂ ಇಂತಹ ಘಟನೆ ಘಟಿಸಿದ್ದು ದುರದೃಷ್ಟಕರ ಎಂದು ಗೃಹ ಸಚಿವ ಡಾ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
ನಾವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಹೊಸ ವರ್ಷ ಮತ್ತು ಕ್ರಿಸ್ ಮಸ್ ಸಂದರ್ಭದಲ್ಲಿ ಇಂತಹ ಘಟನೆಗಳು ಘಟಿಸಿತ್ತವೆ ಎಂದು ಪರಮೇಶ್ವರ ವಿಷಾದ ವ್ಯಕ್ತಪಡಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆಯಲ್ಲಿ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಯುವಕರ ಗುಂಪಿನಿಂದ ಕೆಲವು ಮಹಿಳೆಯರ ಮಾನಭಂಗ ನಡೆಯಿತು. ಅಳುತ್ತಿದ್ದ ಈ ಮಹಿಳೆಯರು ರಕ್ಷಣೆಗಾಗಿ ಮಹಿಳಾ ಪೊಲೀಸರತ್ತ ಧಾವಿಸಿ ದೂರು ಹೇಳಿದ್ದು ಕಂಡು ಬಂತು ಎಂದು ಪತ್ರಿಕೆಯೊಂದು ಕೆಲವು ಮಹಿಳೆಯರು ಪೊಲೀಸರು ದೂರು ನೀಡುತ್ತಿದ್ದ ಫೊಟೋ ಸಹಿತವಾಗಿ ವರದಿ ಮಾಡಿತ್ತು.
ಹೊಸ ವರ್ಷದ ಉದಯ ಹತ್ತಿರವಾಗುತ್ತಿದ್ದಂತೆ ಎಲ್ಲೆಲ್ಲಿಂದಲೋ ಕಾರು, ಬೈಕ್‌ಗಳಲ್ಲಿ ಬಂದ ಪಡ್ಡೆ ಹು‌ಡುಗರ ದಂಡು ಪುಂ‌ಡಾಟಕ್ಕೆ ಶುರುವಿಟ್ಟುಕೊಂಡಿತು. ಯುವತಿಯರು ಕಾಣುತ್ತಲೇ ಹೊಲಸು ಭಾಷೆಯಲ್ಲಿ ಕೇಕೆ ಹಾಕುವುದು, ಗುಂಪು ಗುಂಪಾಗಿ ಅವರತ್ತ ನುಗ್ಗಿ ಹಿಡಿದು ಎಳೆದಾಡುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ