ಬಿಜೆಪಿ ಸಂತಾಯಿಗೆ ಸೂಕ್ತ ಚಿಕಿತ್ಸೆ ನೀಡದ ಆರೋಪ: ವೈದ್ಯನ ಮೇಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹಲ್ಲೆ 
ರಾಜ್ಯ

ತಾಯಿಗೆ ಸೂಕ್ತ ಚಿಕಿತ್ಸೆ ನೀಡದ ಆರೋಪ: ವೈದ್ಯನ ಮೇಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹಲ್ಲೆ

ಅನಾರೋಗ್ಯದಿಂದ ನರಳುತ್ತಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ...

ಸಿರ್ಸಿ: ಅನಾರೋಗ್ಯದಿಂದ ನರಳುತ್ತಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಹೆಗ್ಡೆಯವರ ತಾಯಿಯನ್ನು ಸಿರ್ಸಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಅನಂತ್ ಕುಮಾರ್ ಅವರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಕಷ್ಟು ಸುದ್ದಿ ಮಾಡುತ್ತಿದೆ. ಸಿಸಿಟಿವಿ ದೃಶ್ಯಾವಳಿ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ದೃಶ್ಯದಲ್ಲಿ ಹೆಗ್ಡೆಯವರು ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವುದು ಕಂಡು ಬಂದಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ.ಮಧುಕೇಶ್ವರ ಜೀವಿ, ಡಾ. ಬಾಲಚಂದ್ರ ಮತ್ತು ಡಾ.ರಾಹುಲ್ ಮರ್ಶಾಕರ್ ಅವರ ಮೇಲೆ ಹೆಗ್ಡೆಯವರು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.

ಘಟನೆ ಕುರಿತಂತೆ ಈ ವರೆಗೂ ಅಧಿಕೃತವಾಗಿ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...