ಸಚಿವ ಮಹದೇವ ಪ್ರಸಾದ್ ನಿಧನಕ್ಕೆ ಗಣ್ಯರ ಸಂತಾಪ! 
ರಾಜ್ಯ

ಸಚಿವ ಮಹದೇವ ಪ್ರಸಾದ್ ನಿಧನಕ್ಕೆ ಗಣ್ಯರ ಸಂತಾಪ!

ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ಮರಣ ಸುದ್ದಿಗೆ ಸಂಬಂಧಿಸಿದಂತೆ ರಾಜಕೀಯ ವಲಯದ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ಮರಣ ಸುದ್ದಿಗೆ ಸಂಬಂಧಿಸಿದಂತೆ ರಾಜಕೀಯ ವಲಯದ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹದೇವ ಪ್ರಸಾದ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಬಿಎಸ್ ಯಡಿಯೂರಪ್ಪ ಅವರು, "ಮಹದೇವ ಪ್ರಸಾದ್ ಅವರ ಸಾವಿನ ಸುದ್ಧಿ ಕೇಳಿ ಆಘಾತವಾಗಿದೆ.  ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ನೀಡಲಿ" ಎಂದು ಹೇಳಿದ್ದಾರೆ.

ಅಂತೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು  ಹೇಳಿದ್ದಾರೆ. ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದು,  ಮಹದೇವ ಪ್ರಸಾದ್ ಅವರ ಸಾವಿನ ಸುದ್ದಿ ಕೇಳಿ ನೋವಾಗಿದೆ. ಅವರಿಗಿನ್ನೂ ಕೇವಲ 58 ವರ್ಷ ವಯಸ್ಸು. ಇಷ್ಟು ಚಿಕ್ಕವಯಸ್ಸಿನಲ್ಲೇ ಅವರು ನಮ್ಮನ್ನು  ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT