ಮೈಸೂರು ಮೃಗಾಲಯ (ಸಂಗ್ರಹ ಚಿತ್ರ) 
ರಾಜ್ಯ

ಹಕ್ಕಿ ಜ್ವರ ಭೀತಿ: ತಿಂಗಳ ಕಾಲ ಮೈಸೂರು ಮೃಗಾಲಯ ಬಂದ್!

ಹಕ್ಕಿ ಜ್ವರ ಭೀತಿ ಆವರಿಸಿರುವ ಹಿನ್ನಲೆಯಲ್ಲಿ ಸಮಾರು 125 ವರ್ಷಗಳ ಇತಿಹಾಸವಿರುವ ಮೈಸೂರಿನ ಐತಿಹಾಸಿಕ ಶ್ರೀಚಾಮರಾಜೇಂದ್ರ ಮೃಗಾಲಯವನ್ನು ಇದೇ ಮೊದಲ ಬಾರಿಗೆ ಮುಂಜಾಗ್ರತಾ ಕ್ರಮವಾಗಿ ಒಂದು ತಿಂಗಳ ಕಾಲ ಮುಚ್ಚಲಾಗತ್ತಿದೆ.

ಮೈಸೂರು: ಹಕ್ಕಿ ಜ್ವರ ಭೀತಿ ಆವರಿಸಿರುವ ಹಿನ್ನಲೆಯಲ್ಲಿ ಸಮಾರು 125 ವರ್ಷಗಳ ಇತಿಹಾಸವಿರುವ ಮೈಸೂರಿನ ಐತಿಹಾಸಿಕ ಶ್ರೀಚಾಮರಾಜೇಂದ್ರ ಮೃಗಾಲಯವನ್ನು ಇದೇ ಮೊದಲ ಬಾರಿಗೆ ಮುಂಜಾಗ್ರತಾ ಕ್ರಮವಾಗಿ ಒಂದು  ತಿಂಗಳ ಕಾಲ ಮುಚ್ಚಲಾಗತ್ತಿದೆ.

ಮೈಸೂರು ಮೃಗಾಲಯದ ಆಡಳಿತ ಸಿಬ್ಬಂದಿಗಳು ತಿಳಿಸಿರುವಂತೆ ಮೃಗಾಲಯದಲ್ಲಿ ಹಕ್ಕಿ ಜ್ವರ ಭೀತಿ ಆವರಿಸಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದೆ. ಮೃಗಾಲಯದ ಕೊಳ-3ರಲ್ಲಿ ವಲಸೆ ಹಕ್ಕಿಗಳು ಮೃತಪಟ್ಟಿದ್ದು, ನ್ಯಾಷನಲ್  ಇನ್​ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಆಂಡ್ ಅನಿಮಲ್ ಡಿಸೀಸ್ (ಎನ್​ಐಎಚ್​ಎಸ್​ಎಡಿ) ಸಂಸ್ಥೆಯು ಮೃತಪಟ್ಟ ಹಕ್ಕಿಗಳಲ್ಲಿ ಎಚ್5ಎನ್8 ವೈರಾಣು ಇರುವುದನ್ನು ಮಂಗಳವಾರ ದೃಢಪಡಿಸಿರುವ ಹಿನ್ನೆಲೆಯಲ್ಲಿ ಮೃಗಾಲಯವನ್ನು  ಬಂದ್ ಮಾಡಲು ಮೃಗಾಲಯ ಆಡಳಿತ ಮಂಡಳಿ ನಿರ್ಧರಿಸಿದೆ. ಹೀಗಾಗಿ ಇದೇ ಜನವರಿ 4 ರಿಂದ ಫೆಬ್ರವರಿ 2ರವರೆಗೆ ಮೃಗಾಲಯವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅದೇ ಕೊಳದಲ್ಲಿ ಡಿಸೆಂಬರ್ 30ರಂದು ಮತ್ತೆ 1 ಸ್ಪಾಟ್ ಬಿಲ್ಡ್ ಪೆಲಿಕಾನ್ ಮತ್ತು 1 ಗ್ರೇಯ್ಲಾಗ್ ಗೂಸ್ ಮೃತಪಟ್ಟಿರುವುದು ಕಂಡು ಬಂತು. ಮೃತ ಹಕ್ಕಿಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದಾಗ ಮೃತಪಟ್ಟ ಹಕ್ಕಿಗಳಲ್ಲಿ  ಎಚ್5ಎನ್8 ವೈರಾಣು ಇರುವುದು ದೃಢಪಟ್ಟಿದೆ. ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕಿ ಕಮಲಾ ಕರಿಕಾಳನ್ ಅಧ್ಯಕ್ಷತೆಯಲ್ಲಿ ಮಂಗಳವಾರ ತುರ್ತು ಸಭೆ ನಡೆಸಲಾಯಿತು. ಮತ್ತಷ್ಟು ಹಕ್ಕಿಗಳಿಗೆ ಹರಡುವುದನ್ನು ತಡೆಗಟ್ಟಲು  ಮೃಗಾಲಯವನ್ನು ಬಂದ್ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಕಾರಂಜಿ ಕೆರೆ ಸೋಂಕು ಮುಕ್ತ
ಇನ್ನು ಮೃಗಾಲಯದ ಆಡಳಿತಕ್ಕೆ ಒಳಪಟ್ಟಿರುವ ಪಕ್ಕದ ಕಾರಂಜಿಕೆರೆಯಲ್ಲಿಯೂ ಪರೀಕ್ಷೆ ನಡೆಸಲಾಗಿದ್ದು, ಇಲ್ಲಿ ಹಕ್ಕಿಗಳಿಗೆ ಯಾವುದೇ ರೀತಿಯ ಸೋಂಕು ಕಾಣಿಸಿಕೊಂಡಿಲ್ಲ. ಹೀಗಾಗಿ ಕಾರಂಜಿಕೆರೆ ಎಂದಿನಂತೆ ಪ್ರವಾಸಿಗರಿಗೆ  ಮುಕ್ತವಾಗಿರಲಿದೆ ಎಂದು ಆಡಳಿತ ಸಿಬ್ಬಂದಿಗಳು ತಿಳಿಸಿದ್ದಾರೆ. ಮೃಗಾಲಯದಲ್ಲಿ ಡಿಸೆಂಬರ್ 28 ರಂದು 1 ಸ್ಪಾಟ್ ಬಿಲ್ಡ್ ಪೆಲಿಕನ್ ಮತ್ತು 3 ಗ್ರೇಯ್ಲಾಗ್ ಗೂಸ್ ಮೃತಪಟ್ಟಿದ್ದವು.

ಮೈಸೂರು ಮೃಗಾಲಯ ಸುಮಾರ 80 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, ಪ್ರತೀ ವರ್ಷ 3 ಮಿಲಿಯನ್ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರತಿ ನಿತ್ಯ ಕನಿಷ್ಠ 6 ಸಾವಿರ ಮಂದಿ ಪ್ರವಾಸಿಗರು ಭೇಟಿ  ನೀಡುತ್ತಿದ್ದಾರೆ. 125ನೇ ವರ್ಷಾಚರಣೆ ಸಿದ್ಧತೆಯಲ್ಲಿ ತೊಡಗಿರುವ ಸಂದರ್ಭದಲ್ಲಿಯೇ ಮೈಸೂರು ಮೃಗಾಲಯ ಬಂದ್ ಆಗಿರುವುದು ಪ್ರವಾಸಿಗರ ಪಾಲಿಗೆ ನಿರಾಸೆ ಮೂಡಿಸಿದೆ.

ಕೆಲವು ತಿಂಗಳ ಹಿಂದೆ ಇದೇ ಹಕ್ಕಿಜ್ವರ ಭೀತಿ ಹಿನ್ನೆಲೆಯಲ್ಲಿ ದೆಹಲಿ ಮೃಗಾಲಯ ಬಂದ್ ಆಗಿತ್ತು. ಒಡಿಶಾ ಮತ್ತು ಕೇರಳದ ಮೃಗಾಲಯಗಳಲ್ಲೂ ಹಕ್ಕಿ ಜ್ವರ ಸೋಂಕು ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT