ಸಿಎಂ ಇಬ್ರಾಹಿಂ 
ರಾಜ್ಯ

ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿರುದ್ಧ ಬಲವಂತದ ಗರ್ಭಪಾತ ಮಾಡಿಸಿದ ಆರೋಪ

ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ತಮ್ಮ ಪುತ್ರಿಗೆ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂಬ ...

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ತಮ್ಮ ಪುತ್ರಿಗೆ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 
ಸಿಎಂ ಇಬ್ರಾಹಿಂ ಪುತ್ರಿ ಇಫಾ ಅವರು ಏಳು ತಿಂಗಳ ಹಿಂದೆ ಅಪ್ಪನ ವಿರೋಧ ಕಟ್ಟಿಕೊಂಡು ಚಿಕ್ಕಪ್ಪ ಸಿ.ಎಂ.ಖಾದರ್‌ ಅವರ ಪುತ್ರ ಸಿ.ಎಂ.ಫೈಸಲ್ ಅವರೊಂದಿಗೆ ಪ್ರೇಮ ವಿವಾಹವಾಗಿದ್ದರು. ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದ ಇಫಾ, ತವರು ಮನೆಗೆ ಬಂದಾಗ ಇಬ್ರಾಹಿಂ ಅವರು ಮಗಳಿಗೆ ಹಣ್ಣಿನ ರಸದಲ್ಲಿ ಗರ್ಭಪಾತದ ಮಾತ್ರೆ ಬೆರೆಸಿ ಕೊಟ್ಟಿದ್ದಾರೆ ಸಿ.ಎಂ.ಇಬ್ರಾಹಿಂ ಅವರ ಸಹೋದರ ಸಿ.ಎಂ.ಖಾದರ್‌ ಆರೋಪಿಸಿದ್ದಾರೆ.

ಇಫಾಗೆ ಅವಳ ತಾಯಿ ಹಣ್ಣಿನ ರಸ ನೀಡಿದ್ದಾರೆ. ಇದನ್ನು ಕುಡಿದ ಬಳಿಕ ಇಫಾಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಬಳಿಕ, ವಿಕ್ರಂ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಇಫಾ ಅವರನ್ನ ಜನವರಿ 2 ರಂದು ಆಸ್ಪತ್ರೆಗೆ ಕರೆದುಕೊಂಡು ಬಂದರು. ಅವರಿಗೆ ತೀವ್ರ ರಕ್ತಸ್ರಾವ ಆಗುತ್ತಿತ್ತು. ಹೀಗಾಗಿ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ರೋಗಿಯ ಜೀವಕ್ಕೆ ಅಪಾಯ ಇದ್ದಿದ್ದರಿಂದ ಅವರ ತಾಯಿಯ ಒಪ್ಪಿಗೆ ಪಡೆದು ಗರ್ಭಪಾತ ಮಾಡಲಾಯಿತು. ರೋಗಿಯ ಸ್ಥಿತಿ ಗಂಭೀರವಾಗಿದ್ದರಿಂದ ಅವರ ಪತಿಗೆ ಈ ವಿಷಯ ತಿಳಿಸಲು ಸಾಧ್ಯವಾಗಲಿಲ್ಲ  ಎಂದು ವಿಕ್ರಂ ಆಸ್ಪತ್ರೆಯು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ಸಿಎಂ ಇಬ್ರಾಹಿಂ ಅಳಿಯ ಫೈಸಲ್ ವಿಕ್ರಂ ಆಸ್ಪತ್ರೆಗೆ ನುಗ್ಗಿ ಅಲ್ಲಿ ಕಿಟಕಿ-ಬಾಗಿಲುಗಳನ್ನು ಒಡೆದು ಧ್ವಂಸ ಗೊಳಿಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು