ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು: ಎಂಡೋಸಲ್ಫಾನ್ ಪೀಡಿತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಆಲಡ್ಕ ಗ್ರಾಮದಲ್ಲಿ ಎಂಡೋಸಲ್ಫನ್ ಪೀಡಿತ ಒಂದೇ ಕುಟುಂಬದ ನಾಲ್ವರು...

ಸಾಂದರ್ಭಿಕ ಚಿತ್ರ
Lingaraj Badiger
Updated On : 5 Jan 2017, 4:00 am
ಮಂಗಳೂರು: ಮಂಗಳೂರು ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಆಲಡ್ಕ ಗ್ರಾಮದಲ್ಲಿ ಎಂಡೋಸಲ್ಫನ್ ಪೀಡಿತ ಒಂದೇ  ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. 
ಇಂದು ಬೆಳಗ್ಗೆ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರು ಬಾಬುಗೌಡ(62), ಸದಾನಂದ(32), ಗಂಗಮ್ಮ(55) ಹಾಗೂ ನಿತ್ಯಾನಂದ(30) ಎಂದು ಗುರುತಿಸಲಾಗಿದೆ. ಮೂವರ ಶವಗಳು ಕೆರೆಯಲ್ಲಿ ಪತ್ತೆಯಾಗಿದ್ದು, ನಿತ್ಯಾನಂದನ ದೇಹ ಇನ್ನೂ ಸಿಕ್ಕಿಲ್ಲ. ಆತನ ಶವಕ್ಕಾಗಿ ಹುಡುಕಾಟ ಮುಂದುವರಿದಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Advertisement

Advertisement

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments