ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 6 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಆರು ವರ್ಷದ ಮಗಳನ್ನು ಕೊಂದು ತಾಯಿ ನೇಣಿಗೆ ಶರಣಾಗಿರುವ ಘಟನೆ ಗಿರಿನಗರ ಟಿ ಬ್ಲಾಕ್ ನಲ್ಲಿ ನಡೆದಿದೆ....

ಬೆಂಗಳೂರು:  ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದು ತಾಯಿ ನೇಣಿಗೆ ಶರಣಾಗಿರುವ ಘಟನೆ ಗಿರಿನಗರ ಟಿ ಬ್ಲಾಕ್ ನಲ್ಲಿ ನಡೆದಿದೆ.

ಕನಿಮೋಳಿ ಮತ್ತು ಶ್ರೀದೇವಿ ಮೃತ ದುರ್ದೈವಿಗಳು. ತಮ್ಮ ಸಾವಿಗೆ ಅತ್ತೆ ಹಾಗೂ ಮಾವನ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಆರೋಪಿಸಲಾಗಿದೆ.ಮೃತ ಕನಿಮೋಳಿ ಪತಿ ವಿಜಯ್ ಕುಮಾರ್ ಔಷಧಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಗಳು ಶ್ರೀದೇವಿ ಖಾಸಗಿ ಶಾಲೆಯಲ್ಲಿ 1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ರಾತ್ರಿ ಸುಮಾರು 8.30 ರ ವೇಳೆಗೆ ವಿಜಯ್ ಕುಮಾರ್ ಮನೆಗೆ ಬಂದು ಬೆಲ್ ಮಾಡಿದ್ದಾರೆ, ಒಳಗಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿ ತೆರದು ನೋಡಿದ್ದಾರೆ. ಕನಿಮೋಳಿ ಸೀಲಿಂಗ್ ಫ್ಯಾನ್ ನಲ್ಲಿ ನೇತಾಡುತ್ತಿದ್ದುದ್ದು ಕಂಡು ಬಂದಿದೆ.

ನೆರೆಹೊರೆಯವರು ಗಿರಿನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ, ಆತ್ಮಹತ್ಯೆಗು ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಕನ್ನಿಮೋಳಿ ತಮ್ಮ ಸಾವಿಗೆ ಗಂಡನ ಮನೆಯವರ ಕಿರುಕುಳ ಕಾರಣ ಎಂದು ಬರೆದಿಟ್ಟಿದ್ದಾರೆ.

 ಪತಿ ವಿಜಯ್ ಕುಮಾರ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಜಯ್ ಕುಮಾರ್ ಪೋಷಕರು ಬ್ಯಾಟರಾಯನಪುರದಲ್ಲಿ ನೆಲೆಸಿದ್ದು, ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': D K ಶಿವಕುಮಾರ್

'ನಿಮ್ಮ ಕುಚುಕು ಗೆಳೆಯನಿಗಾಗಿ ವಚನ ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ': ಹೆಚ್ ಡಿ ಕುಮಾರಸ್ವಾಮಿ

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

SCROLL FOR NEXT