ರಾಜ್ಯ

ಚಿಕ್ಕಮಗಳೂರು: ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ

Srinivas Rao BV
ಚಿಕ್ಕಮಗಳೂರು: ಚಿಕ್ಕಮಗಳೂರಿನ ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಲ್ಲಿ ಸಕ್ರಿಯರಾಗಿದ್ದು, ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಉಂಟಾದ ಘರ್ಷಣೆ ಬೆಳವಣಿಗೆಯಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 
ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.7 ರಂದು ಎನ್ಎಸ್ಎಸ್ ಹಾಗೂ ಎಬಿವಿಪಿ ವತಿಯಿಂದ ಗಡಿಯಲ್ಲಿ ಹುತಾತ್ಮರಾದ ಯೋಧರ ಕುರಿತಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆ ಅಡ್ಡಿ ಪಡಿಸಿದ್ದು, ಕಾರ್ಯಕ್ರಮ ಮಾಡದಂತೆ ಆಯೋಜಕರಿಗೆ ಎಚ್ಚರಿಕೆ ನೀಡಿದ್ದೂ ಅಲ್ಲದೇ ಹಲ್ಲೆ ಮಾಡಿದ್ದಾರೆ ಎಂದು ಎಬಿವಿಪಿ ಸಂಘಟನೆ ಆರೋಪಿಸಿದೆ. 
ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಬಿವಿಪಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದ್ದು, ರಾಜ್ಯ ಸರ್ಕಾರ ತನ್ನ ಪ್ರಭಾವವನ್ನು ಬಳಸಿ ಎಬಿವಿಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿದ್ದಾರೆ. ಇದರಿಂದ ಖಿನ್ನತೆಗೆ ಒಳಗಾಗಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದು ಜ.11 ಹಾಗೂ 12 ರಂದು ಪ್ರತಿಭಟನೆ ಹೋರಾಟಕ್ಕೆ ಮಾಡುವುದಾಗಿ ಎಬಿವಿಪಿ ತಿಳಿಸಿದೆ. 
SCROLL FOR NEXT