ಜಿ.ರಾಜಶೇಖರ್ 
ರಾಜ್ಯ

ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸ್ವೀಕರಿಸಲ್ಲ: ರಾಜಶೇಖರ್

ಲೇಖಕ ಹಾಗೂ ವಿಮರ್ಶಕ ಜಿ. ರಾಜಶೇಖರ್‌ ಅವರು ತಮ್ಮ ‘ಬಹುವಚನ ಭಾರತ’ ಕೃತಿಗೆ ನೀಡಲಾಗಿರುವ 2015ನೇ ಸಾಲಿನ....

ಮಂಗಳೂರು: ಲೇಖಕ ಹಾಗೂ ವಿಮರ್ಶಕ ಜಿ. ರಾಜಶೇಖರ್‌ ಅವರು ತಮ್ಮ ‘ಬಹುವಚನ ಭಾರತ’ ಕೃತಿಗೆ ನೀಡಲಾಗಿರುವ 2015ನೇ ಸಾಲಿನ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸ್ವೀಕರಿಸದಿರಲು ನಿರ್ಧರಿಸಿದ್ದಾರೆ.
ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಆದರೆ ಪ್ರಶಸ್ತಿ ಸ್ವೀಕರಿಸದಿರಲು ನಿರ್ಧರಿಸಿರುವ ರಾಜಶೇಖರ್ ಅವರು, ಅಕಾಡೆಮಿ ನನ್ನ ಬಗ್ಗೆ ತೋರಿದ ಗೌರವಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ 2015ರಲ್ಲಿ ನಡೆದ ಘಟನೆಗಳ ನೋವಿನಿಂದಾಗಿ ನಾನು ವಿನಯಪೂರ್ವಕವಾಗಿ ಪ್ರಶಸ್ತಿ ನಿರಾಕರಿಸುತ್ತಿದ್ದೇನೆ ಎಂದಿದ್ದಾರೆ.
2015ರಲ್ಲಿ ಹಲವು ಸಾಹಿತಿಗಳು ತಮಗೆ ನೀಡಿದ ಪ್ರಶಸ್ತಿಗಳನ್ನು ನಿರಾಕರಿಸಲು ಹಾಗೂ ವಾಪಸ್‌ ನೀಡಲು ಯಾವ ಸನ್ನಿವೇಶ  ಕಾರಣವಾಯಿತೋ, ಆ ಸನ್ನಿವೇಶ ಈಗ ಇನ್ನಷ್ಟು ಹದಗೆಟ್ಟಿದೆ. ಹಾಗಾಗಿ ಈ ಪ್ರಶಸ್ತಿಯನ್ನು ನಾನು ಸ್ವೀಕರಿಸಲಾರೆ ಎಂದು ಅವರು ಹೇಳಿದ್ದಾರೆ.
ಅಸಹಿಷ್ಣುತೆ ಇನ್ನೂ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಶೇಖರ್ ಅವರು, ಸರ್ಕಾರದ ಹಲವು ನಿರ್ಧಾರಗಳನ್ನು ಗಮನಿಸಿದರೆ, ದೇಶದಲ್ಲಿ ಈಗ ಅಸಹಿಷ್ಣುತೆ ಮತ್ತಷ್ಟು ಹೆಚ್ಚಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT