ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸೋಮವಾರದಿಂದ ಖಾಸಗಿ ಆಸ್ಪತ್ರೆಗೆಗಳಲ್ಲಿ ಬಿಪಿಎಲ್ ಕಾರ್ಡ್ ರೋಗಿಗಳಿಗೆ ಚಿಕಿತ್ಸೆ ಇಲ್ಲ

ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ರೋಗಿಗಳಿಗೆ ಸೋಮವಾರದಿಂದ ಚಿಕಿತ್ಸೆಗೆ ದಾಖಲಿಸಿಕೊಳ್ಳದಿರಲು...

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ರೋಗಿಗಳಿಗೆ ಸೋಮವಾರದಿಂದ ಚಿಕಿತ್ಸೆಗೆ ದಾಖಲಿಸಿಕೊಳ್ಳದಿರಲು ನಿರ್ಧರಿಸಲಾಗಿದೆ.

ಸರ್ಕಾರಿ ವೈದ್ಯಕೀಯ ವಿಮಾ ಯೋಜನೆಗಳಾದ ವಾಜಪೇಯಿ ಆರೋಗ್ಯ ಶ್ರೀ ಮತ್ತು ಸುವರ್ಣ ಆರೋಗ್ಯ ಟ್ರಸ್ಟ್ ಗಳಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳನ್ನು ಅಡ್ಮಿಟ್ ಮಾಡಿಕೊಳ್ಳದೇ ಇರಲು ನಿರ್ಧರಿಸಲಾಗಿದೆ ಎಂದು ಫೆಡರೇಷನ್ ಆಫ್ ಹೆಲ್ತ್ ಕೇರ್ ಅಸೋಸಿಯೇಷನ್ ತಿಳಿಸಿದೆ.

ಹಾಗೆಯೇ ರಾಜ್ಯ ಸರ್ಕಾರಿ ನೌಕರರು ಎಪಿಎಲ್ ಕಾರ್ಡ್ ನಲ್ಲಿ ಪಡೆಯಬಹುದಾಗಿದ್ದ ಚಿಕಿತ್ಸೆಗೂ ಕೂಡ ನಿರ್ಬಂಧ ಹೇರಲಾಗಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ 34.25 ಕೋಟಿ ಹಣ ಬಿಡುಗಡೆ ಮಾಡಿದೆ. ಸರ್ಕಾರ ಇನ್ನೂ 86.71 ಕೋಟಿ ರೂ ಹಣ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬಾಕಿ ಹಣ ಪಾವತಿಸುವವರೆಗೂ ಬಿಪಿಎಲ್  ಕಾರ್ಡ್ ಹೊಂದಿರುವ ಹೊಸ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೇ ಇರವು ನಿರ್ಧರಿಸಲಾಗಿದೆ.

ಈ ಸಂಬಂಧ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಜೊತೆ ಸೊಮವಾರ ಬೆಳಗ್ಗೆ 11.30 ಕ್ಕೆ ಫೆಡರೇಷನ್ ಆಫ್ ಹೆಲ್ತ್ ಕೇರ್ ಅಸೋಸಿಯೇಷನ್ ಸಭೆ ನಡೆಸಿ ಹಣ ಬಿಡುಗಡೆ ಸಂಬಂಧ ಚರ್ಚೆ ನಡೆಸಲಿದೆ. ಮಾರ್ಚ್ ಅಂತ್ಯದ ವೇಳೆಗೆ ಎಲ್ಲಾ ಹಣ ಬಿಡುಗಡೆ ಮಾಡುವುದಾಗಿ ಇಲಾಖೆ ಹೇಳಿದೆ, ಆದರೆ ಆ ಸಮಯದವರೆಗೂ ಕಾಯಲು ಸಾಧ್ಯವಿಲ್ಲ ಎಂದು ಒಕ್ಕೂಟ ತಿಳಿಸಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕೆ. ರಮೇಶ್ ಕುಮಾರ್, ಆಸ್ಪತ್ರೆಗಳಿಗೆ ಪಾವತಿಸಬೇಕಾಗಿರುವ ಹಣದ ಸಂಬಂಧ ನಾವು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ. ಅವರಿಗೆ ನೀಡಬೇಕಾಗಿರುವ ಹಣವನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ