ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

Vishwanath S

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯನಿರತ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್‌ಎಫ್‌) ಪೇದೆ 32 ವರ್ಷದ ಮಹಾರಾಷ್ಟ್ರ ಮೂಲದ ಸುರೇಶ್ ಗಾಯಕ್ ವಾಡ್ ಅವರು ರೈಫಲ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್ ನಂಬರ್ 2ರಲ್ಲಿ ಪೇದೆ ಆತ್ಮಹತ್ಯೆಗೆ ಶರಣಾಗಿದ್ದು ಕೆಂಪೇಗೌಡ ವಿಮಾನ ನಿಲ್ದಾಣದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

SCROLL FOR NEXT