ಗಸ್ತು ವಾಹನಗಳ ಲೋಕಾರ್ಪಣೆ 
ರಾಜ್ಯ

ಹೆದ್ದಾರಿಗಳಲ್ಲಿ ಕ್ರಿಮಿನಲ್ ಗಳ ನಿಗ್ರಹಕ್ಕೆ 100 ಗಸ್ತು ವಾಹನಗಳು

ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತ ಹಾಗೂ ಕಳ್ಳತನದ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ 100 ಹೈಟೆಕ್ ಗಸ್ತು ವಾಹನಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತ ಹಾಗೂ ಕಳ್ಳತನದ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ 100 ಹೈಟೆಕ್ ಗಸ್ತು ವಾಹನಗಳನ್ನು ಬಿಡುಗಡೆ ಮಾಡಿದೆ. 
ಈಗಾಗಲೇ ಘೋಷಿಸಲಾಗಿದ್ದ 3000 ಹೈಟೆಕ್ ಗಸ್ತು ವಾಹನಗಳ ಪೈಕಿ 100 ವಾಹನಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಸಮಾರಂಭದಲ್ಲಿ ಭಾಗಿಯಾಗಿದ್ದ ಡಿಜಿ, ಐಜಿಪಿ ಓಂ ಪ್ರಕಾಶ್, ಸಿಸಿಟಿವಿ ಕ್ಯಾಮರಾ, ಹೆಚ್ಚು ವೋಲ್ಟೇಕ್ ಹೊಂದಿರುವ ದೀಪಗಳು, ಜಿಪಿಆರ್ ಎಸ್ ಸೇರಿದಂತೆ ಹಲವು ಅತ್ಯಾಧುನಿಕ ಸೌಲಭ್ಯ ಹೊಂದಿರುವ ಪ್ರತಿ ವಾಹನಕ್ಕೂ 10.45 ಲಕ್ಷ ರೂಪಾಯಿ ಖರ್ಚಾಗಿದೆ. ವಾಹನದಲ್ಲಿ ಓರ್ವ ಸಹಾಯಕ ಸಬ್ ಇನ್ಸ್ ಪೆಕ್ಟರ್, ಓರ್ವ ಮುಖ್ಯ ಪೇದೆ, ಓರ್ವ ಪೇದೆ ಹಾಗೂ ವಾಹನ ಚಾಲಕ ಇರಲಿದ್ದು ಈಗಾಗಲೇ ಎಲ್ಲರಿಗೂ ತರಬೇತಿ ನೀಡಲಾಗಿದೆ ಪ್ರತಿ ಜಿಲ್ಲೆಯ ಎಸ್ ಪಿ ವ್ಯಾಪ್ತಿಯಲ್ಲಿ ವಾಹನಗಳಿರಲಿವೆ. ಪ್ರತಿ 40 ಕಿಮೀ ದೂರ ವ್ಯಾಪ್ತಿಯನ್ನು ಹೊಂದಿರಲಿದ್ದು, ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!