ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ.ಎನ್ ಬೆಟ್ಟೇಗೌಡ ಆಯ್ಕೆ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ...
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷರಾಗಿದ್ದ ಡಾ. ಅಪ್ಪಾಜಿಗೌಡ ಅವರನ್ನು ಕೆಲ ದಿನಗಳ ಹಿಂದೆ ಹುದ್ದೆಯಿಂದ ಪದಚ್ಯುತಗೊಳಿಸಿ ನಿರ್ಣಯ ಕೈಗೊಳ್ಳಲಾಗಿತ್ತು.
ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಅ.ದೇವೇಗೌಡ, ಡಾ.ಬಿ.ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎನ್.ರಾಮಚಂದ್ರ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ.ಪ್ರಸಾದ್ ಘೋಷಿಸಿದ್ದಾರೆ.
ಖಜಾಂಚಿಯಾಗಿ ಎನ್.ರಮೇಶ್ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ 35 ಮಂದಿ ಸದಸ್ಯರು ಮತ ಚಲಾಯಿಸಿದರು. ಅಪ್ಪಾಜಿಗೌಡ ಕಣದಿಂದ ಹಿಂದೆ ಸರಿದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.