ವಿವೇಕಾನಂದರ ಜೊತೆಗೆ ಸಿಎಂ ಸಿದ್ದರಾಮಯ್ಯ ಫೋಟೋ: ಪ್ರತಿಭಟನೆಗೆ ಕಾರಣವಾದ ಟಿ-ಶರ್ಟ್ 
ರಾಜ್ಯ

ವಿವೇಕಾನಂದರ ಜೊತೆಗೆ ಸಿಎಂ ಸಿದ್ದರಾಮಯ್ಯ ಫೋಟೋ: ಪ್ರತಿಭಟನೆಗೆ ಕಾರಣವಾದ ಟಿ-ಶರ್ಟ್

ಸ್ವಾಮಿ ವಿವೇಕಾನಂದ ಅವರ 154ನೇ ಜಯಂತಿಯನ್ನು ರಾಜ್ಯ ಸರ್ಕಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವೇಕಾನಂದ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಬಸರಾಜ ರಾಯರೆಡ್ಡಿ ಅವರ ಫೋಟೋ...

ಬೆಂಗಳೂರು: ಸ್ವಾಮಿ ವಿವೇಕಾನಂದ ಅವರ 154ನೇ ಜಯಂತಿಯನ್ನು ರಾಜ್ಯ ಸರ್ಕಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವೇಕಾನಂದ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಬಸರಾಜ ರಾಯರೆಡ್ಡಿ ಅವರ ಫೋಟೋ ಇದ್ದ ಟೀ-ಶರ್ಟ್ ಗಳನ್ನು ನೀಡಲಾಗಿತ್ತು. ಈ ಟಿ-ಶರ್ಟ್ ಇದೀಗ ಪ್ರತಿಭಟನೆಗಳಿಗೆ ದಾರಿ ಮಾಡಿಕೊಟ್ಟಿದೆ.

ಸ್ವಾಮಿ ವಿವೇಕಾನಂದ ಅವರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾರದ ಸಮಾರೋ ಸಮಾರಂಭ ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಇಂದು ಅದ್ದೂರಿಯಾಗಿ ನಡೆಯುತ್ತಿದೆ. ಸಮಾರಂಭ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಟಿ-ಶರ್ಟ್ ಗಳನ್ನು ನೀಡಲಾಗಿತ್ತು.

ಈ ಟಿ-ಶರ್ಟ್ ಗಳಿಗೆ ಇದೀಗ ವಿದ್ಯಾರ್ಥಿ ಸಮೂಹ ಹಾಗೂ ಕೆಲ ಶಿಕ್ಷಕ ವೃಂದಗಳಿಂದ ವಿರೋಧಗಳು ವ್ಯಕ್ತವಾಗ ತೊಡಗಿವೆ.

ಟಿ-ಶರ್ಟ್ ಗಳ ಮೇಲೆ ಸ್ವಾಮಿ ವಿವೇಕಾನಂದ ಅವರ ಫೋಟೋ ಮಾತ್ರ ಇದ್ದಿದ್ದರೆ ಬಹಳ ಸಂತೋಷದಿಂದ ಹಾಕಿಕೊಳ್ಳುತ್ತಿದ್ದೆವು. ಆದರೆ, ಅದರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಫೋಟೋಗಳನ್ನು ಕೂಡ ಹಾಕಲಾಗಿದೆ. ಸಿದ್ದರಾಮಯ್ಯ, ಬಸವರಾಜ ರಾಯರೆಡ್ಡಿ ಅವರ ಫೋಟೋ ಇರುವ ಟಿ-ಶರ್ಟ್ ಗಳನ್ನೇಕೆ ನಾವು ಹಾಕಿಕೊಳ್ಳಬೇಕು ಎಂದು ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬರು ಪ್ರಶ್ನಿಸಿದ್ದಾರೆ.

ಇದೊಂದು ಸರ್ಕಾರದ ಕಾರ್ಯಕ್ರಮವಾಗಿದ್ದು, ರಾಜಕೀಯ ನಾಯಕರ ಫೋಟೋಗಳನ್ನೇ ಪ್ರಿಂಟ್ ಮಾಡಬೇಕಿತ್ತು. ರಾಜಕೀಯ ನಾಯಕರ ಫೋಟೋಗಳಿಲ್ಲದಿದ್ದರೆ ವಿದ್ಯಾರ್ಥಿಗಳು ಟಿ-ಶರ್ಟ್ ಗಳನ್ನು ಧರಿಸುತ್ತಿದ್ದರು. ಕೆಲ ವಿದ್ಯಾರ್ಥಿಗಳು ಕೆಲ ಸಂಘಟನೆಗಳ ಸದಸ್ಯರಾಗಿದ್ದಾರೆ. ಕೆಲ ರಾಜಕೀಯ ಪಕ್ಷಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳೇಕೆ ಈ ಟಿ-ಶರ್ಟ್ ಗಳನ್ನು ಧರಿಸಬೇಕು ಎಂದು ನಗರದ ಕಾಲೇಜೊಂದರ ಪ್ರಾಂಶುಪಾಲರು ಹೇಳಿದ್ದಾರೆ.

ಕಾರ್ಯಕ್ರಮ ಆಯೋಜಕರೇನಾದರೂ ವಿದ್ಯಾರ್ಥಿಗಳು ಟಿ-ಶರ್ಟ್ ಗಳನ್ನು ಧರಿಸಲೇಬೇಕೆಂದು ಬಲವಂತ ಮಾಡಿದರೆ ಕಾರ್ಯಕ್ರಮಕ್ಕೆ ಹೋಗದಿರಲು ಎಬಿವಿಪಿ ಸೇರಿದಂತೆ ಕೆಲ ವಿದ್ಯಾರ್ಥಿ ಸಂಘಟನೆಗಳು ನಿರ್ಧಾರ ಕೈಗೊಂಡಿವೆ.

ಸರ್ಕಾರ ನಡೆಸುತ್ತಿರುವ ಈ ಕಾರ್ಯಕ್ರಮಕ್ಕೆಕ್ಕೆ ರಾಜ್ಯದ ನಾನಾ ಭಾಗಗಳಿಂದ 50 ಸಾವಿರಕ್ಕೂ ಹೆಚ್ಚು ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಗರಕ್ಕೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಈಗಾಗಲೇ 900 ಬಸ್ ಗಳ ವ್ಯವಸ್ಥೆಯನ್ನು ಮಾಡಿದೆ.

ನಿನ್ನೆಯಷ್ಟೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ದಿನದಿಂದಲೂ ಪ್ರತೀ ವರ್ಷ ಸ್ವಾಮಿ ವಿವೇಕಾನಂದ ಅವರ ಜನ್ಮದಿನವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷ ಉನ್ನತ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಅದ್ದೂರಿಯಾಗಿ ಸಮಾರಂಭವನ್ನು ಏರ್ಪಡಿಸಲಾಗಿದೆ. ರಾಷ್ಟ್ರೀಯ ಯುವ ಸಪ್ತಾಹಕ್ಕಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ರೂ. 1 ಲಕ್ಷ ಹಾಗೂ ತಾಲೂಕು ಮಟ್ಟಕ್ಕೆ ರೂ. 50 ಸಾವಿರ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಈ ಕಾರ್ಯಕ್ರಮಕ್ಕಾಗಿ ರೂ. 2 ರಿಂದ 2.5 ಕೋಟಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT