ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಹರ್ಮಾನ್ ಸಾಫ್ಟ್‌ವೇರ್ ಕಂಪನಿಯ ಕಟ್ಟಡದ ಮೇಲಿನಿಂದ ಜಿಗಿದು ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹರ್ಮಾನ್ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿ 30 ವರ್ಷದ ಶೋಭಾ ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಂಪನಿಯ 4ನೇ ಮಹಡಿಯಲ್ಲಿರುವ ಕೆಫೆಟೇರಿಯಾದಿಂದ ಜಿಗಿದ್ದು ಆತ್ಮಹತ್ಯೆಗೆ ಶರಣಾಗಿದ್ದು, ಯಾವ ಕಾರಣಕ್ಕೆ ಶೋಭಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ.
ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.