ರೈಲಿಗೆ ಚಾಲನೆ ನೀಡುತ್ತಿರುವ ಡಿವಿ ಸದಾನಂದಗೌಡ 
ರಾಜ್ಯ

ಯಶವಂತಪುರ-ಹೌರಾ ಹಮ್ ಸಫರ್ ರೈಲಿಗೆ ಚಾಲನೆ

ಯಶವಂತಪುರ-ಹೌರಾ ಹಮ್ ಸಫರ್ ಎಕ್ಸ್‌ಪ್ರೆಸ್ ರೈಲಿಗೆ ಗುರುವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಚಾಲನೆ ನೀಡಿದರು.

ಬೆಂಗಳೂರು: ಯಶವಂತಪುರ-ಹೌರಾ ಹಮ್ ಸಫರ್ ಎಕ್ಸ್‌ಪ್ರೆಸ್ ರೈಲಿಗೆ ಗುರುವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಚಾಲನೆ ನೀಡಿದರು. 
ಸದಾನಂದಗೌಡ ಅವರು ಇಂದು ಬೆಳಗ್ಗೆ 10 ಗಂಟೆಗೆ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ನೂತನ ರೈಲಿನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಂತರ ಮಾತನಾಡಿದ ಅವರು, ಬೆಂಗಳೂರು-ಕೊಯಮತ್ತೂರ್ ಇಂಟರ್ ಸಿಟಿ ರೈಲು ಸದ್ಯದಲ್ಲೇ ಆರಂಭವಾಗಲಿದೆ. ಬೆಂಗಳೂರು-ಭುವನೇಶ್ವರ್, ಬೆಂಗಳೂರು-ಗಂಗಾನಗರ ನೂತನ ರೈಲು ಬಿಡಲಾಗುತ್ತಿದೆ. ಈ ಎಲ್ಲಾ ರೈಲಿನ ವೇಳಾಪಟ್ಟಿ ಸಿದ್ಧವಾಗುತ್ತಿದೆ ಎಂದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿದ ಡಿವಿಎಸ್, ನಾಳೆ ರಾಜ್ಯದ ನಾಯಕರೊಂದಿಗೆ ಹೈಕಮಾಂಡ್ ಸಭೆ ಕರೆದಿದೆ. ವರಿಷ್ಠರು ಬಿಕ್ಕಟ್ಟು ಪರಿಹಾರ ಮಾಡಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!