ವಿಜಯ್ ಮಲ್ಯ 
ರಾಜ್ಯ

ವಿಜಯ್ ಮಲ್ಯ ವಿರುದ್ಧ ಜಾಮೀನು ಸಹಿತ ವಾರಂಟ್ ಹೊರಡಿಸಿದ ಕರ್ನಾಟಕ ಹೈಕೋರ್ಟ್

ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಮದ್ಯ ದೊರೆ...

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಮದ್ಯ ದೊರೆ ವಿಜಯ್ ಮಲ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಜಾಮೀನು ಸಹಿತ ವಾರಂಟ್ ವಿಧಿಸಿದೆ.  
ಬ್ಯಾಂಕ್ ಗಳ ಸಮೂಹ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಕೇಸು ದಾಖಲಿಸಿದ್ದಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಇಂದು ಈ ಆದೇಶ ಹೊರಡಿಸಿದೆ.ನ್ಯಾಯಮೂರ್ತಿಗಳಾದ ಜಯಂತ್ ಎಮ್ ಪಟೇಲ್ ಮತ್ತು ಅರವಿಂದ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಮೊನ್ನೆ ಜನವರಿ 20ರಂದು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು. 
ಫೆಬ್ರವರಿ 19ಕ್ಕೆ ಮತ್ತೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಈ ಮುನ್ನ ಕಳೆದ ಜನವರಿ 19ರಂದು ನ್ಯಾಯಾಧೀಕರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಸಮೂಹ ಬ್ಯಾಂಕುಗಳಿಗೆ ಆದೇಶ ನೀಡಿ ಮಲ್ಯರಿಂದ 6,000 ಕೋಟಿಗೂ ಅಧಿಕ ಸಾಲವನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಿತ್ತು. ಇದರಲ್ಲಿ ಮಲ್ಯ ಅವರು ಕಾನೂನು ಉಲ್ಲಂಘಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT