ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬೈಕ್ ಗೆ ಕಾರು ಡಿಕ್ಕಿ, ಇಬ್ಬರ ಸಾವು: ವಿದ್ಯಾರ್ಥಿ ಬಂಧನ

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರಿನಲ್ಲಿ ...

ಬೆಂಗಳೂರು: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರಿನಲ್ಲಿ ನಡೆದಿದೆ.

ಮುರುಗನ್ (48) ಹಾಗೂ ವೆಂಕಟೇಶ್ (50) ಎಂಬುವರು ಮೃತಪಟ್ಟಿದ್ದಾರೆ. ಮುರುಗನ್ ಗಾರೆ ಕೆಲಸ ಮಾಡುತ್ತಿದ್ದರು. ವೆಂಕಟೇಶ್ ಟೈಲರ್ ಆಗಿದ್ದರು. ಇಬ್ಬರೂ ಆರ್‌.ಟಿ.ನಗರ ಸಮೀಪದ ಚಾಮುಂಡೇಶ್ವರಿನಗರ ನಿವಾಸಿಗಳು

ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸರು ಕಾರು ಚಾಲಕ ಇರ್ಫಾನ್ ಅಲಿ ಹುಸೈನ್ (19) ಎಂಬಾತನನ್ನು ಬಂಧಿಸಿದ್ದಾರೆ. ಈತ ಹೆಬ್ಬಾಳದ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ.

ಜಕ್ಕೂರು ನಿವಾಸಿಯಾದ ಇರ್ಫಾನ್, ಬೆಳಿಗ್ಗೆ 10 .15 ರ ಸುಮಾರಿಗೆ ಕಾರು ಚಲಾಯಿಸಿಕೊಂಡು ಕಾಲೇಜಿನ ಕಡೆಗೆ ಹೋಗುತ್ತಿದ್ದ. ಇದೇ ವೇಳೆ ಮುರುಗನ್ ಹಾಗೂ ವೆಂಕಟೇಶ್ ಅವರು ಬೈಕ್‌ನಲ್ಲಿ ಜಕ್ಕೂರಿಗೆ ತೆರಳುತ್ತಿದ್ದರು. ವೇಗವಾಗಿ ಬಂದ ಕಾರು, ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಇಬ್ಬರ ಮೇಲೂ ಕಾರಿನ ಚಕ್ರಗಳು ಹರಿದು ಹೋಗಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಂತರ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಲು ಯತ್ನಿಸಿದ ಇರ್ಫಾನ್‌ನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದರು. ಬೈಕ್ ಸವಾರರಿಬ್ಬರು ಹೆಲ್ಮೆಟ್ ಧರಿಸಿರಲಿಲ್ಲ ಎಂಬುದು ತನಿಖೆಯಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!