ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ಸಂಬಂಧ ಮಾಜಿ ಲೋಕಾಯುಕ್ತ ನ್ಯಾ.ವೈ ಭಾಸ್ಕರ್ ರಾವ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜ.28 ರಂದು ಜಾಮೀನು ಮಂಜೂರು ಮಾಡಿದೆ.
ನ್ಯಾ. ವೈ ಭಾಸ್ಕರ್ ರಾವ್ ಅವರಿಗೆ ಜಾಮೀನು ನೀಡುವ ಸಂಬಂಧ ಆರೋಪಿ ಪರ ವಕೀಲ ಸಿವಿ ನಾಗೇಶ್ ಹಾಗೂ ಸರ್ಕಾರಿ ವಿಶೇಷ ಅಭಿಯೋಜಕ(ಎಸ್ ಪಿಪಿ) ಅಶೋಕ್ ನಾಯಕ್ ವಾದವನ್ನು ಆಲಿಸಿದ ನಂತರ ವಿಶೇಷ ನ್ಯಾಯಾಲಯ ಜ.28 ಕ್ಕೆ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಭ್ರಷ್ಟಾಚಾರ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೂಚಿಸಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿರುವ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನ್ಯಾ.ವೈ ಭಾಸ್ಕರ್ ರಾವ್ ಅವರಿಗೆ ಜಾಮೀನು ನೀಡಲು ಸರ್ಕಾರಿ ವಿಶೇಷ ಅಭಿಯೋಜಕರು ವಿರೋಧ ವ್ಯಕ್ತಪಡಿಸಿದ್ದರು.