ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅನವಶ್ಯಕವಾಗಿ ಹಿಂದಿ ಭಾಷೆ ಬಳಕೆ ವಿರುದ್ಧ ವಿರೋಧಗಳು ವ್ಯಕ್ತವಾಗಿದ್ದು ಇದಕ್ಕೆ ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷ ದ್ರಾವಿಡ ಮುನ್ನೇತ್ರ ಕಜ್ಹಗಮ್(ಡಿಎಂಕೆ) ಬೆಂಬಲ ವ್ಯಕ್ತಪಡಿಸಿದೆ.
ಕರ್ನಾಟಕ ರಾಜ್ಯ ಡಿಎಂಕೆ ಮುಖ್ಯಸ್ಥರಾದ ರಾಮಸ್ವಾಮಿ ಎಂಬುವರು ಮೆಟ್ರೋ ರೈಲು ನಿಗಮಕ್ಕೆ ಪತ್ರ ಬರೆದಿದ್ದು ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆಯ ಬಳಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪತ್ರದಲ್ಲಿ ಭಾರತದ ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡಬೇಕು. ಅಂತೆ ಹಿಂದಿ ಭಾಷೆಯನ್ನು ದೇಶದೆಲ್ಲೆಡೆ ಹೇರುವುದು ಬೇಡ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎನ್ನುವ ನಿಲುವನ್ನು ನಮ್ಮ ಪಕ್ಷದ್ದಾಗಿದೆ ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಬರೆದಿದ್ದಾರೆ.
ನಮ್ಮ ಮೆಟ್ರೋದಲ್ಲಿ ಇದೀಗ ಅಳವಡಿಸಿಕೊಂಡಿರುವ ಹುಳುಕಿನ ಭಾಷಾನೀತಿಯನ್ನು ಕೈಬಿಟ್ಟು ಕನ್ನಡ-ಇಂಗ್ಲಿಷ್ ಭಾಷೆಗಳನ್ನಷ್ಟೇ ಬಳಸಬೇಕೆಂದು ಪಕ್ಷ ಆಗ್ರಹಿಸಿದೆ. ಇನ್ನು ಈ ಬಗ್ಗೆ ಕನ್ನಡಿಗರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics