ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ 1 ಲಕ್ಷ ಬಡವರಿಗೆ ಸರ್ಕಾರದಿಂದ ನಿವೇಶನ ಭಾಗ್ಯ!

ರಾಜಧಾನಿ ಬೆಂಗಳೂರಿನ ರಹಿತ ಬಡವರಿಗೆ ನಿವೇಶನ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸುಮಾರು 1 ಲಕ್ಷ ವಸತಿ ನಿರ್ಮಿಸುವ ನಿರ್ಧಾರ ಕೈಗೊಂಡಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಹಿತ ಬಡವರಿಗೆ ನಿವೇಶನ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸುಮಾರು 1 ಲಕ್ಷ ವಸತಿ ನಿರ್ಮಿಸುವ ನಿರ್ಧಾರ ಕೈಗೊಂಡಿದೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ 1 ಲಕ್ಷ ವಸತಿ ರಹಿತ ಬಡವರಿಗೆ ಸೂರು ಕಲ್ಪಿಸುವ ಆಸ್ವಾಸನೆ ನೀಡಿದ್ದರು. ಅದರಂತೆ ಇದೀಗ ಆ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಕಾರ್ಯರೂಪಕ್ಕೆ ತರಲು  ನಿರ್ಧರಿಸಿದ್ದು. ಸುಮಾರು 1 ಲಕ್ಷ ಬೆಂಗಳೂರಿನ ನಿವೇಶನ ರಹಿತ ಬಡವರಿಗೆ ಸೂರು ಕಲ್ಪಿಸಲು ಮುಂದಾಗಿದೆ. ಈ ಬಗ್ಗೆ ಯೋಜನೆ ರೂಪುರೇಷೆ ಕುರಿತು ರ್ಚಚಿಸಲು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ವಸತಿ, ಹಣಕಾಸು, ಕಂದಾಯ  ಇಲಾಖೆ ಮತ್ತು ಗೃಹ ಮಂಡಳಿ, ಬಿಬಿಎಂಪಿ ಅಧಿಕಾರಿಗಳ ಸಭೆ ಕರೆದಿದ್ದ ಮುಖ್ಯಮಂತ್ರಿ, ಯೋಜನೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು. ಬಹುಮಹಡಿಗಳ ನಿರ್ಮಾಣಕ್ಕೆ ಅಗತ್ಯವಾದ  ಭೂಮಿಯನ್ನು ಕೂಡಲೇ ವಸತಿ ಇಲಾಖೆಗೆ ಹಸ್ತಾಂತರ ಮಾಡುವಂತೆಯೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.

ಇನ್ನು ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಗೆ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದ್ದು, 1,130 ಎಕರೆ ಸರ್ಕಾರಿ ಜಮೀನಿನ ಪಟ್ಟಿಯನ್ನು ಮಂಜೂರಾತಿಗಾಗಿ ಕಂದಾಯ ಇಲಾಖೆಗೆ ಸಲ್ಲಿಸಲಾಗಿದೆ ಎಂದು ವಸತಿ ಇಲಾಖೆ  ಅಧಿಕಾರಿಗಳು ತಿಳಿಸಿದರು. ಅಂತೆಯೇ ಗುರುತಿಸಿರುವ ಜಮೀನಿನಲ್ಲಿ ಮನೆಗಳನ್ನು ನಿರ್ವಿುಸಬಹುದೆ? ಅದು ವಾಸ ಯೋಗ್ಯ ಭೂಮಿಯೇ ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಹತ್ತು ದಿನದಲ್ಲಿ ವರದಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮನೆಗಳನ್ನು ಅತ್ಯಂತ ಪಾರದರ್ಶಕವಾಗಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅರ್ಜಿಗಳನ್ನು ಆನ್​ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗುವುದು. ರಾಜೀವ್​ಗಾಂಧಿ ಗ್ರಾಮೀಣ ವಸತಿ ನಿಗಮ ಈ  ಯೋಜನೆಯನ್ನು ಕಾರ್ಯರೂಪಕ್ಕೆ ತರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಮಹತ್ವದ ಸಭೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಎಂ. ಕೃಷ್ಣಪ್ಪ, ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಮತ್ತಿತರರು  ಉಪಸ್ಥಿತರಿದ್ದರು.

ನಗರದಲ್ಲಿ ಈ ಹಿಂದೆ ಅಕ್ರಮ ಒತ್ತುವರಿ ತೆರವುಗೊಳಿಸಿದ 1,130 ಎಕರೆ ಪ್ರದೇಶದಲ್ಲಿಯೇ ಈಗ ಬಡವರ ಬಹುಮಹಡಿ ಮನೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದ್ದು, ಈ ಪೈಕಿ ಶೇ.30ರಷ್ಟು ಮನೆಗಳು  ಪರಿಶಿಷ್ಠ ಜಾತಿ ಮತ್ತು ಶೇ.10ರಷ್ಟು ಮನೆಗಳು ಪರಿಶಿಷ್ಚ ಪಂಗಡಕ್ಕೆ ಸೇರಿದ ವಸತಿ ರಹಿತ ಬಡವರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್