ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಉಪನಗರ ರೈಲು ಯೋಜನೆಯಡಿ ವರ್ಷಾಂತ್ಯದೊಳಗೆ 4 ರೈಲು ಸಂಚಾರ: ಡಿವಿಎಸ್

ಉಪನಗರ ರೈಲು ಯೋಜನೆಯಡಿ ಡಿಸೆಂಬರ್ ಅಂತ್ಯದೊಳಗೆ ನಾಲ್ಕು ಮೆಮು ರೈಲುಗಳು ಸಂಚಾರ ಆರಂಭಿಸಲಿವೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ...

ಡಿ.ವಿ ಸದಾನಂದಗೌಡ
Shilpa D
Updated On : 7 Jul 2017, 12:59 pm
ಬೆಂಗಳೂರು: ಉಪನಗರ ರೈಲು ಯೋಜನೆಯಡಿ ಡಿಸೆಂಬರ್ ಅಂತ್ಯದೊಳಗೆ ನಾಲ್ಕು ಮೆಮು (ಮೇನ್ ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯೂನಿಟ್) ರೈಲುಗಳು ಸಂಚಾರ ಆರಂಭಿಸಲಿವೆ ಎಂದು ಕೇಂದ್ರ ಸಚಿವ  ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಉಪನಗರ ಮೆಮು ರೈಲು ಸಂಚಾರ ಆರಂಭವಾಗಲಿದ್ದು, ಹಂತ ಹಂತವಾಗಿ ರೈಲುಗಳ ಸಂಖ್ಯೆ ಏರಿಸಲಾಗುವುದು.
ಸಾಂಪ್ರಾದಾಯಿಕ ಪ್ಯಾಸೆಂಜರ್ ರೈಲುಗಳ ಬದಲಿಗೆ ಹೊಸ ಮೆಮು ರೈಲುಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Advertisement

ಮೆಟ್ರೋ 1 ನೇ ಹಂತದ ಕಾಮಗಾರಿ ಪೂರ್ಣಗೊಂಡಿರುವುದು ನಗರದಲ್ಲಿ ಸ್ವಲ್ಪ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಿದೆ. ಉಪನಗರ ರೈಲು ಯೋಜನೆ ಜಾರಿಯಾದರೇ ಶೇ.30 ರಿಂದ 40 ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ ಎಂದು ವಿವರಿಸಿದ್ದಾರೆ.
ಉಪನಗರ ರೈಲು ಯೋಜನೆಗೆ 10,500 ಕೋಟಿ ವೆಚ್ಚವಾಗಲಿದ್ದು, ಶೇ. 20 ರಷ್ಟು ರಾಜ್ಯಮತ್ತು ಶೇ. 20 ರಷ್ಟು ಯೋಜನಾ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. ರೈಲ್ವೆ ಸಚಿವ ಸುರೇಶ್ ಪ್ರಭು ಅವರ ಜೊತೆ ಮಾತನಾಡಿ ತಿಂಗಳಾಂತ್ಯದೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಉಪನಗರ ರೈಲು ಯೋಜನೆಗೆ  ರಾಜ್ಯ ಸರ್ಕಾರವು 327 ಕೋಟಿ ರು ನೀಡಲು ಸಿದ್ಧವಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ,ಜೆ ಜಾರ್ಜ್ ಹೇಳಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments