ರಾಜ್ಯ

ಕನ್ನಡ ಮಾಧ್ಯಮದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲು: ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ

Shilpa D
ಬೆಂಗಳೂರು: ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ನಿಯಮಗಳಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕನ್ನಡ ಮಾಧ್ಯಮ ಮೀಸಲಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೇ 10ನೇ ತರಗತಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿರಬೇಕಿತ್ತು.  ಕನಿಷ್ಠ ವಿದ್ಯಾರ್ಹತೆ ಏಳನೇ ತರಗತಿ ಎಂದು ನಿಗದಿಪಡಿಸಿದ್ದ ಹುದ್ದೆಗಳಿಗೆ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿಲ್ಲ ಎಂಬ ಕಾರಣಕ್ಕೆ ಅವಕಾಶ ನಿರಾಕರಿಸಲಾಗುತ್ತಿತ್ತು. ಈ ನಿಯಮವನ್ನು ಬದಲಾವಣೆ ಮಾಡಿರುವ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ಯಾವುದಾದರೂ ಹುದ್ದೆಗೆ ಏಳನೇ ತರಗತಿ ವಿದ್ಯಾರ್ಹತೆಯಾಗಿದ್ದು, ಅರ್ಜಿ ಹಾಕುವ ಅಭ್ಯರ್ಥಿ ಅಲ್ಲಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದ್ದರೆ ಅಂತಹವರಿಗೂ ಮೀಸಲು ಸೌಲಭ್ಯ ಸಿಗಲಿದೆ.
ಹೊಸ ಸುತ್ತೋಲೆ ಅನ್ವಯ, ದೇಶದ ಯಾವುದೇ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ  1ರಿಂದ 10 ನೇ ತರಗತಿವರೆಗೆ ಓದಿದವರು ಇನ್ನು ಮುಂದೆ ಅರ್ಜಿ ಸಲ್ಲಿಸಬಹುದು. 
ಇದರಿಂದಾಗಿ ಕರ್ನಾಟಕದ ಗಡಿಯಲ್ಲಿರುವ  ಕನ್ನಡ ಶಾಲೆಗಳಲ್ಲಿ ಓದಿದ ಹೊರರಾಜ್ಯಗಳ ಕನ್ನಡಿಗರಿಗೂ ಉದ್ಯೋಗಾವಕಾಶ ಸಿಗಲಿದೆ. ಈ ಹಿಂದೆ ಕರ್ನಾಟಕದ ಶಾಲೆಗಳಲ್ಲಿ ಓದಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ಇತ್ತು. 
SCROLL FOR NEXT