ರಾಜ್ಯ

ಜುಲೈ 17 ನಂತರ ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ

Shilpa D
ಬೆಂಗಳೂರು: ಜುಲೈ 17 ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ ಮೊದಲ ಅರ್ಧ ತಿಂಗಳು ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು,  ನೈರುತ್ಯ ಮುಂಗಾರು ಆಗಮನ ಉತ್ತಮ ಮಳೆಯಾಗುವ ನಿರೀಕ್ಷೆ ಮೂಡಿಸಿದೆ.
ಒಡಿಸ್ಸಾ  ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿಂರುವುದರಿಂದ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ. ಜುಲೈ 17 ರಿಂದ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. 
ಕರ್ನಾಟದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ  ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಮಳೆ ಬೀಳಲಿದೆ.
ಜುಲೈ ತಿಂಗಳಲ್ಲಿ ಮಳೆ ಕೊರತೆ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ ತಿಂಗಳಲ್ಲಿ ಮಲೆನಾಡು ಭಾಗದಲ್ಲಿ ಮಳೆ ಕೊರತೆಯಾಗಿತ್ತು. ಜುಲೈ 13 ರ ವರೆಗೆ ರಾಜ್ಯದಲ್ಲಿ ಶೇ. 52ರಷ್ಟು ಮಳೆ ಕೊರತೆಯಾಗಿದೆ. 
SCROLL FOR NEXT