ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಬಿಎಸ್ ಯಡಿಯೂರಪ್ಪ ಹಾಗೂ ಡಿಕೆ ಶಿವಕುಮಾರ್ ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಇಂದು ಎತ್ತಿ ಹಿಡಿದಿದೆ.
ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಾಸಕರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಇಂದಿರಾನಗರ ಸಮೀಪದ ಬೆನ್ನಿಗಾನಹಳ್ಳಿಯ ನಾಲ್ಕೂವರೆ ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡು, ಬೇರೆಯವರಿಗೆ ಮಾರಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಅಬ್ರಹಾಂ ಮೇಲ್ಮನವಿ ಸಲ್ಲಿಸಿದ್ದರು.