ರೂಪಾ ಮತ್ತು ಸತ್ಯನಾರಾಯಣರಾವ್ 
ರಾಜ್ಯ

ತನಿಖಾಧಿಕಾರಿಗಳ ಭೇಟಿಗೂ ಮುನ್ನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಕಾರಾಗೃಹ ಡಿಜಿಪಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಡಿಐಜಿ ಡಿ. ರೂಪಾ ಅವರು ವರದಿ ನೀಡಿದ....

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಡಿಐಜಿ ಡಿ. ರೂಪಾ ಅವರು ವರದಿ ನೀಡಿದ ಬೆನ್ನಲ್ಲೇ ಕಾರಾಗೃಹ ಪೊಲೀಸ್ ಮಹಾ ನಿರ್ದೇಶಕ ಎಚ್ ಎನ್ ಸತ್ಯನಾರಾಯಣ ರಾವ್ ಅವರು ಶನಿವಾರ ದಿಡೀರ್ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಹಾಗೂ ಕರೀಂ ಲಾಲ್ ತೆಲಗಿ ಸೇರಿದಂತೆ ಇತರೆ ಖೈದಿಗಳಿಗೆ ವಿಐಪಿ ಟ್ರೀಟ್ ಮೆಂಟ್ ನೀಡಲಾಗುತ್ತಿದೆ ಎಂದು ಡಿ ರೂಪಾ ಅವರು ಪೊಲೀಸ್ ಮಹಾ ನಿರ್ದೇಶಕರಿಗೆ ಜುಲೈ 12ರಂದು ವರದಿ ನೀಡಿದ್ದರು. ಅಲ್ಲದೆ ಇಂದು ಮತ್ತೊಂದು ವರದಿ ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ತನಿಖೆಗೆ ಆದೇಶಿಸಿದ್ದಾರೆ. ಆದರೆ ಇಂದು ತನಿಖಾಧಿಕಾರಿಗಳು ಜೈಲಿಗೆ ಭೇಟಿ ನೀಡುವ ಮುನ್ನವೇ ಸತ್ಯನಾರಾಯಣ ರಾವ್ ಅವರು ಜೈಲಿಗೆ ತೆರಳಿ, ದಾಖಲೆಗಳ ಪರಿಶೀಲನೆ ನಡೆಸಿರುವುದಲ್ಲದೆ, ಅಧಿಕಾರಿಗಳ ಜತೆ ಮಾತುಕತೆ ನಡೆಸಿರುವುದು ಅನುಮಾನ ಮೂಡಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಮಾಜಿ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರು ಜೈಲಿಗೆ ಭೇಟಿ ನೀಡುವ ಮುನ್ನ ಎಚ್ಚೆತ್ತುಕೊಂಡಿರುವ ಪರಪ್ಪನ ಜೈಲು ಅಧಿಕಾರಿಗಳು ‘ಸ್ವಚ್ಛತಾ’ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video