ರಾಜ್ಯ

ರಾಜ್ಯಕ್ಕೆ ಪ್ರತ್ಯೇಕ ಧ್ವಜ: 9 ಸದಸ್ಯರ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

Lingaraj Badiger
ನವದೆಹಲಿ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ವಿನ್ಯಾಸ ರಚಿಸಲು 9 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ.
ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ದೇಶದ ಯಾವುದೇ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿಲ್ಲ. ಇದೀಗ ಕರ್ನಾಟಕ ಪ್ರತ್ಯೇಕ ಧ್ವಜ ಹೊಂದಲು ಮುಂದಾಗಿದೆ.
ಈ ಸಂಬಂಧ ಜೂನ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಈ ಸಮಿತಿಯಲ್ಲಿ ಹಿರಿಯ ಸಾಹಿತಿಗಳು ಹಾಗೂ ಚಿಂತಕರು ಸದಸ್ಯರಾಗಿರಲಿದ್ದಾರೆ. ಈ ಸಮಿತಿಯು ಅಧ್ಯಯನ ನಡೆಸಿ ಹಾಲಿ ಇರುವ ಧ್ವಜವನ್ನೇ ಅಂಗೀಕರಿಸಬೇಕೆ, ಇಲ್ಲವೇ ಹೊಸದೊಂದು ಧ್ವಜವನ್ನು ಮಾನ್ಯ ಮಾಡಬೇಕೆ ಎಂಬುದರ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ.
ಸಧ್ಯಕ್ಕೆ ಕರ್ನಾಟಕ ಸರ್ಕಾರ ಹಳದಿ, ಕೆಂಪು ಮಿಶ್ರಿತ ಧ್ವಜವನ್ನು ನಾಡ ಧ್ವಜವನ್ನಾಗಿ ಸ್ವೀಕರಿಸಿದೆ. ಆದರೆ, ಇದಕ್ಕೆ ಯಾವುದೇ ಅಧಿಕೃತವಾದ ಮಾನ್ಯತೆ ಇಲ್ಲ.  ದೇಶದಲ್ಲಿ ಎಲ್ಲಾ ರಾಜ್ಯಗಳು ತ್ರಿವರ್ಣ ಧ್ವಜವನ್ನು ಮಾತ್ರ ಹೊಂದಬೇಕೆಂಬ ನಿಯಮವಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರ ಸಂವಿಧಾನದ 370ನೆ ವಿಧಿಯ ಪ್ರಕಾರ ಪ್ರತ್ಯೇಕವಾದ ಧ್ವಜವನ್ನು ನೀಡಲಾಗಿದೆ.
SCROLL FOR NEXT