ಬೆಂಗಳೂರು: ಕಾವೇರಿ ಕೊಳ್ಳ ಪ್ರದೇಶದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ನೀರಿನ ಸಮಸ್ಯೆ ಹೆಚ್ಚಿದೆ. ಮಳೆಯ ಕೊರತೆಯಿಂದಾಗಿ ಜಲಾಶಯಗಳ ನೀರಿನ ಮಟ್ಟ ತಗ್ಗಿದೆ.
ರಾಜ್ಯದ ರೈತರಿಗೆ ನೀರಿನ ಅಭಾವವಿದೆ, ನ್ಯಾಯ ಮಂಡಳಿಯ ಐತೀರ್ಪು ಅನ್ವಯ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಜಲಾಶಯಗಳ ನೀರಿನ ಒಳಹರಿವು ಪ್ರಮಾಣದ ಶೇ 30ರಷ್ಟು ಹೊರ ಬಿಡಲಾಗುತ್ತಿದೆ. ಸಾಮಾನ್ಯ ಮಳೆ ವರ್ಷಗಳಲ್ಲಿ ಜೂನ್‌ನಲ್ಲಿ 10 ಮತ್ತು ಜುಲೈ ತಿಂಗಳಲ್ಲಿ 34 ಟಿಎಂಸಿ ಅಡಿ ನೀರು ತಮಿಳುನಾಡಿಗೆ ಹರಿಸಬೇಕು. ಆದರೆ, ಪ್ರಸಕ್ತ ವರ್ಷ ಜೂನ್‌ನಿಂದ ಈವರೆಗೆ 2.2 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಕಾವೇರಿ ಕಣಿವೆ ಭಾಗದಲ್ಲಿ ಮುಂದೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಹೀಗಾಗಿ, ಕೃಷಿಗೆ ನೀರು ಬಿಡದಿರುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದೆ ತೀರ್ಮಾನಿಸಲಾಗುವುದು. ಕುಡಿಯುವ ನೀರಿಗೆ ಮೊದಲ ಆದ್ಯತೆ ಎಂದೂ ಅವರು ಹೇಳಿದರು.
ಗೋವಾಕ್ಕೆ ನೀರು ಹರಿಸುವ ಪ್ರಶ್ನೆಯೇ ಇಲ್ಲ: ಮಹದಾಯಿಯಿಂದ ಗೋವಾಕ್ಕೆ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂಬ ವರದಿಯನ್ನು ಅಲ್ಲಗಳೆದ ಸಚಿವರು, ಗೋವಾಕ್ಕೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics