ಸಂಗ್ರಹ ಚಿತ್ರ 
ರಾಜ್ಯ

ಮಹದಾಯಿ ವಿವಾದ: ಇನ್ನೆಂದೂ ಗೋವಾ ಸರ್ಕಾರಕ್ಕೆ ಪತ್ರ ಬರೆಯೊಲ್ಲ: ಸಚಿವ ಎಂಬಿ ಪಾಟೀಲ್

ಮಹದಾಯಿ ವಿವಾದ ಇತ್ಯರ್ಥ ಸಂಬಂಧ ಇನ್ನು ಮುಂದೆ ಗೋವಾ ಸರ್ಕಾರಕ್ಕೆ ಪತ್ರ ಬರೆಯುವುದಿಲ್ಲ ಎಂದು ಕರ್ನಾಟಕದ ನೀರಾವರಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಮಹದಾಯಿ ವಿವಾದ ಇತ್ಯರ್ಥ ಸಂಬಂಧ ಇನ್ನು ಮುಂದೆ ಗೋವಾ ಸರ್ಕಾರಕ್ಕೆ ಪತ್ರ ಬರೆಯುವುದಿಲ್ಲ ಎಂದು ಕರ್ನಾಟಕದ ನೀರಾವರಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ನ್ಯಾಯಾಲಯದ ಹೊರಗೆ ಮಾತುಕತೆ ಮೂಲಕ ವಿವಾದ ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಾಡಿರುವ ಆದೇಶದ ಹೊರತಾಗಿಯೂ ಗೋವಾ ಸರ್ಕಾರ ಕರ್ನಾಟಕದ ಮಾತುಕತೆ ಪ್ರಯತ್ನಕ್ಕೆ ಸ್ಪಂದಿಸುತ್ತಿಲ್ಲ. ಏತನ್ಮಧ್ಯೆ ಗೋವಾದ ನೀರಾವರಿ ಸಚಿವ ವಿನೋದ್ ಪಾಲೇಕರ್ ಕರ್ನಾಟಕದ ಮಾತುಕತೆ ಪ್ರಯತ್ನವನ್ನು ತಂತ್ರಗಾರಿಕೆ ಎಂದು ಬಣ್ಣಿಸಿದ್ದು, ಸಂಧಾನದ ಹೆಸರಲ್ಲಿ ಕರ್ನಾಟಕ ನಾಟಕವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಹಿನ್ನಲೆಯಲ್ಲಿ ಸತತ ಪ್ರಯತ್ನದ ಹೊರತಾಗಿಯೂ ಗೋವಾ ಸರ್ಕಾರ ಸ್ಪಂಧಿಸಿದ ಕಾರಣ ಇನ್ನೆಂದೂ ಗೋವಾ ಸರ್ಕಾರಕ್ಕೆ ಪತ್ರ ಬರೆಯುವುದಿಲ್ಲ ಎಂದು ನೀರಾವರಿ ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ವಿವಾದವನ್ನು ನ್ಯಾಯಾಲಯದ ಹೊರಗೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಕರ್ನಾಟಕದ ಸತತ ಪ್ರಯತ್ನಕ್ಕೆ ಗೋವಾ ಸರ್ಕಾರ ಸ್ಪಂಧಿಸುತ್ತಿಲ್ಲ. ಹೀಗಾಗಿ ಗೋವಾಗೆ ಪತ್ರ ಬರೆಯುವುದನ್ನು ನಿಲ್ಲಿಸಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆಯಲಿದ್ದಾರೆ ಎಂದು ಹೇಳಿದರು.

ಅಂತೆಯೇ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಅಂತೆಯೇ ಕರ್ನಾಟಕಕ್ಕೆ ಬೇರೆ ದಾರಿಯಿಲ್ಲ, ಹೀಗಾಗಿ ಕೇಂದ್ರ ಸರ್ಕಾರವೇ ವಿವಾದ ಸಂಬಂಧ ಮಧ್ಯಸ್ಥಿಕೆ ವಹಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!