ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ವೃತ್ತಪತ್ರಿಕೆಗಳಲ್ಲಿ ಆಹಾರ ಪ್ಯಾಕ್ ಮಾಡುವುದು ನಿಷೇಧ

ಆಹಾರಗಳನ್ನು ವೃತ್ತ ಪತ್ರಿಕೆಗಳಲ್ಲಿ ಪ್ಯಾಕ್ ಮಾಡುವುದನ್ನು ನಿಷೇಧಿಸಿ ಆಹಾರ ಸುರಕ್ಷತಾ ಆಯೋಗ ಆದೇಶ ಹೊರಡಿಸಿದೆ....

ಬೆಂಗಳೂರು:  ಆಹಾರಗಳನ್ನು ವೃತ್ತ ಪತ್ರಿಕೆಗಳಲ್ಲಿ ಪ್ಯಾಕ್ ಮಾಡುವುದನ್ನು ನಿಷೇಧಿಸಿ ಆಹಾರ ಸುರಕ್ಷತಾ ಆಯೋಗ ಆದೇಶ ಹೊರಡಿಸಿದೆ.
ರಾಜ್ಯದ 8 ಜಿಲ್ಲೆಗಳಲ್ಲಿ ಆಹಾರ ಪ್ಯಾಕ್ ಮಾಡಲು ವೃತ್ತ ಪತ್ರಿಕೆ ಬಳಕೆ ಮಾಡುವುದನ್ನು ನಿಷೇದಿಸಿ ಆದೇಶ ಹೊರಡಿಸಲಾಗಿದೆ. ವೃತ್ತ ಪತ್ರಿಕೆಗೆ ಬಳಸುವ ಇಂಕ್ ಆಹಾರದ ಜೊತೆ ನೇರ ಸಂಪರ್ಕ ಹೊಂದುವ ಕಾರಣ ಕ್ಯಾನ್ಸರ್ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಬೃಬತ್ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಹಾಗೂ ತುಮಕೂರು ನಗರ ಕಾರ್ಪೋರೇಷನ್ ಗಳ ವ್ಯಾಪ್ತಿಯಲ್ಲಿ ಯಾವುದೇ ಆಹಾರ ಪ್ಯಾಕ್ ಮಾಡಲು ಪ್ರಿಂಟ್ ಮಾಡಿದಂತ ಪೇಪರ್ ಗಳನ್ನು 1 ವರ್ಷದ ಕಾಲ ಬಳಸುವಂತಿಲ್ಲ ಎಂದು ಆಹಾರ ಸುರಕ್ಷತಾ ಆಯೋಗ ಸೂಚಿಸಿದೆ.
ಪೇಪರ್ ಗಳಲ್ಲಿನ ಶಾಹಿ ಆಹಾರ ಪದಾರ್ಥಗಳ ಜೊತೆ ಸೇರಿ ವಿಷಪೂರಿತವಾಗುವ ಸಾಧ್ಯತೆಯಿದೆ. ಹೀಗಾಗಿ ಇಂಥ ಆಹಾರ ಸೇವಿಸುವುದು ಅಸುರಕ್ಷಿತವಾಗಿರುತ್ತದೆ ಎಂದು ಹೇಳಿದೆ. ಗ್ರಾಹಕರು ಈ ಆಹಾರ ಸೇವಿಸುವುದರಿಂದ ಫುಡ್ ಪಾಯ್ಸನ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮೊದಲ ಹಂತವಾಗಿ 8 ಜಿಲ್ಲೆಗಳಲ್ಲಿ ವೃತ್ತ ಪತ್ರಿಕೆ ನಿಷೇಧ ಮಾಡಲಾಗಿದ್ದು, ಹಂತಹಂತವಾಗಿ ರಾಜ್ಯಾದ್ಯಂತ ನಿಷೇಧಿಸಲಾಗಿಸುವುದು ಎಂದು ಆಹಾರ ಮತ್ತು ಸುರಕ್ಷತಾ ಆಯೋಗದ ಆಯುಕ್ತ ಸುಬೋದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!