ಮಸಿ ಬಳಿಯುತ್ತಿರುವ ಕರವೇ ಕಾರ್ಯಕರ್ತರು 
ರಾಜ್ಯ

ಹಿಂದಿ ಹೇರಿಕೆಗೆ ವಿರೋಧ: ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕಕ್ಕೆ ಕರವೇ ಮಸಿ!

ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಕಳೆದ ರಾತ್ರಿ ಇಡೀ ಪ್ರತಿಭಟನೆ ನಡೆಸಿರುವ ಕರವೇ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ  ಕಾರ್ಯಕರ್ತರು ರಾತ್ರಿ ಇಡೀ ನಗರದಾದ್ಯಂತ ಸಂಚರಿಸಿ ನಗರದ ಮೆಟ್ರೋ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

ನಗರದ ಯಶವಂತಪುರ, ರಾಜಾಜಿ ನಗರ, ಇಂದಿರಾನಗರ, ದೀಪಾಂಜಲಿ ನಗರ, ನ್ಯಾಷನಲ್ ಕಾಲೇಜು, ಮೈಸೂರು ರಸ್ತೆ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video