ಬೆಂಬಲಿಗರೊಂದಿಗೆ ಆಗಮಿಸಿದ್ದ ಟಿಟಿವಿ ದಿನಕರನ್ 
ರಾಜ್ಯ

ಶಶಿಕಲಾ ಭೇಟಿಗೆ ಬಂದ ದಿನಕರನ್: ಅವಕಾಶ ನೀಡದೇ ವಾಪಸ್ ಕಳುಹಿಸಿದ ಜೈಲು ಸಿಬ್ಬಂದಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಎಐಎಡಿಎಂಕೆ ನಾಯಕಿ ಶಶಿಕಲಾ ..

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.  ಎಐಎಡಿಎಂಕೆ ನಾಯಕಿ ಶಶಿಕಲಾ ಅವರನ್ನು ಭೇಟಿ ಮಾಡಲು ಅವರ ಸಂಬಂಧಿ ಟಿಟಿವಿ ದಿನಕರನ್  ಆಗಮಿಸಿದ್ದರು. 
ಈ ವೇಳೆ ಶಶಿಕಲಾ ಭೇಟಿ ಮಾಡಲು ದಿನಕರನ್ ಗೆ ಅವಕಾಶ ನೀಡಲು ಜೈಲು ಸಿಬ್ಬಂದಿ ನಿರಾಕರಿಸಿದರು. ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ದಿನಕರನ್ ಶಶಿಕಲಾ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕಲ್ಪಿಸಿಲ್ಲ, ಆರೋಪಗಳೆಲ್ಲವೂ ನಿರಾಧಾರ ಎಂದು ಹೇಳಿದರು.
ಮಧ್ಯಾಹ್ನದ ವೇಳೆಗೆ ತಮ್ಮ ಬೆಂಬಲಿಗರೊಂದಿಗೆ ಜೈಲಿಗೆ ಬಂದಿದ್ದ ದಿನಕರನ್ ಶಶಿಕಲಾ ಭೇಟಿ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಜೈಲಿನ ಸಮೀಪದ ಚೆಕ್ ಪೋಸ್ಟ್ ಬಳಿಯೇ ಅವರನ್ನು ತಡೆದ ಅಧಿಕಾರಿಗಳು ಭೇಟಿ ಮಾಡಲು ಅವಕಾಶ ನೀಡದೇ ವಾಪಸ್ ಕಳುಹಿಸಿದರು.
ಈ ವೇಳೆ ದಿನಕರನ್ ಬೆಂಬಲಿಗರು ಜೈಲು ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ, ಹಿರಿಯ ರಾಜಕಾರಣಿಗಳಿಗೆ ಕರೆ ಮಾಡಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.  ಆದರೆ ಅಂತಿಮವಾಗಿ  ಶಶಿಕಲಾ ಭೇಟಿ ಮಾಡಲು ಸಾಧ್ಯವಾಗದೇ ದಿನಕರ್ ವಾಪಸ್ ತೆರಳಿದರು.
ಶಶಿಕಲಾ ಭೇಟಿ ಮಾಡಲು ದಿನಕರನ್ ಮುಂಚಿತವಾಗಿ ಅನುಮತಿ ಪಡೆದಿರಲಿಲ್ಲ ಹೀಗಾಗಿ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಲಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!