ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ಹಾಗೂ ರಾಜ್ಯದ ಜನರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೋವಿಂದ್ ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಮನಾಥ್ ಕೋವಿಂದ್ ದೇಶದ ಪ್ರಥಮ ಪ್ರಜೆಯಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ವೈಯಕ್ತಿಕ ಹಾಗೂ ರಾಜ್ಯದ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ.
ನಿಮ್ಮ ಆಡಳಿತದ ಅಡಿಯಲ್ಲಿ ದೇಶದಾದ್ಯಂತದ ಎಲ್ಲಾ ಜನರಿಗೆ ಸಮಾನ ಅವಕಾಶಗಳು ದೊರಕುವುದರೊಂದಿಗೆ ಭಾರತ ಉಜ್ವಲಿಸಲಿ ಎಂದು ತಿಳಿಸಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ಚುನಾವಣೆಯಲ್ಲಿ ಮೀರಾಕುಮಾರ್ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್ ಬಲಿಪುಶು ಮಾಡಿತು ಎಂಬ ಆರೋಪ ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಇಲ್ಲಿ ಬಲಿಪಶು ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಜಾಪ್ರಭುತ್ವದ ಚುನಾವಣೆ ನಡೆದಾಗ ಗೆಲುವುದು ಹಾಗೂ ಸೋವು ಸಾಮಾನ್ಯ ಎಂದಿದ್ದಾರೆ.