ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು

ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ....

ಸಾಂದರ್ಭಿಕ ಚಿತ್ರ
Lingaraj Badiger
Updated On : 21 Jul 2017, 5:58 am
ಮಂಡ್ಯ: ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಕೈದಿ ಪಾಂಡವಪುರ ತಾಲೂಕಿನ ಚಿನಕುರಳಿ ನಿವಾಸಿ ರಾಘವೇಂದ್ರ(33) ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದಷ್ಟೇ ಸರಕಳ್ಳತನ ಆರೋಪದಲ್ಲಿ ಜೈಲು ಸೇರಿದ್ದ.
ಕಳ್ಳತನ ಆರೋಪದ ಮೇಲೆ ರೈಲ್ವೈ ಪೊಲೀಸರು ಮೂರು ತಿಂಗಳ ಹಿಂದೆ ರಾಘವೇಂದ್ರನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ರಾಧಿಕಾ ಅವರು ತಿಳಿಸಿದ್ದಾರೆ.

Advertisement

Advertisement

ರಾಘವೇಂದ್ರ ಜೈಲಿಗೆ ಬಂದಾಗಿನಿಂದ ಮಾನಸಿಕವಾಗಿ ನೊಂದಿದ್ದ. ಸಹ ಕೈದಿಗಳ ಮುಂದೆ ನನ್ನನ್ನ ನೋಡಲು ಯಾರೂ ಬಂದಿಲ್ಲ. ಜೈಲಿಗೆ ಬಂದು ಮೂರು ತಿಂಗಳಾಯ್ತು. ಸಂಬಂಧಿಕರು ಒಬ್ಬರೂ ಈ ಕಡೆ ಸುಳಿದಿಲ್ಲ. ಅಷ್ಟೇ ಅಲ್ಲ ಯಾರೂ ಕೊಡಿಸಲು ಬರುತ್ತಿಲ್ಲ ಎಂದು ನೊಂದುಕೊಂಡು ಸಹ ಕೈದಿಗಳ ಬಳಿ ಹೇಳಿಕೊಂಡಿದ್ದ. ಇದೇ ಕಾರಣಕ್ಕೆ ರಾಘವೇಂದ್ರ ಇಂದು ಬೆಳಗ್ಗೆ ಜೈಲಿನ ಶೌಚಾಲಯದ ಕಂಬಿಗೆ ಬೆಡ್‌ಶೀಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಾಧಿಕಾ ಹೇಳಿದ್ದಾರೆ. 
ಈ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಜಿ.ರಾಧಿಕಾ ಅವರು ಜೈಲಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments