ಬೆಂಗಳೂರು: ಸಾಮಾಜಿಕ ಮಾಧ್ಯಮ ಇಂದು ಜನತೆಗೆ ಪರಿಣಾಮಕಾರಿಯಾಗಿ ತಲುಪುತ್ತಿರುವ ಸಂದರ್ಭದಲ್ಲಿ ಜನತೆಗೆ ಬಹುಬೇಗನೆ ತಲುಪಲು ಭಾರತೀಯ ಜನತಾ ಪಾರ್ಟಿ ಬೃಹತ್ ಸಾಮಾಜಿಕ ಮಾಧ್ಯಮ ಸಮಾಲೋಚನೆ ನಡೆಸಲು ಮುಂದಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಮತದಾರರನ್ನು ಸೆಳೆಯುವ ಕಾರ್ಯತಂತ್ರವಾಗಿ ಈ ಸಾಮಾಜಿಕ ಮಾಧ್ಯಮ ಸಮಾಲೋಚನೆ ಬೆಂಗಳೂರಿನಲ್ಲಿ ನಡೆಯಲಿದೆ.
ಪಕ್ಷದ ಸಾಮಾಜಿಕ ಮಾಧ್ಯಮ ಘಟಕ ಈಗಾಗಲೇ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ಮಾಧ್ಯಮ ತಂಡವನ್ನು ನೇಮಿಸುವ ಕಾರ್ಯದಲ್ಲಿ ತೊಡಗಿದೆ. ಪ್ರತಿ ತಂಡದಲ್ಲಿ ಕನಿಷ್ಠ 20 ಮಂದಿ ಸದಸ್ಯರಿರುತ್ತಾರೆ. ಅದಕ್ಕೆ ಹೊರತಾಗಿ ಪಕ್ಷಕ್ಕೆ ಉತ್ಸಾಹಿ ಯುವಕ, ಯುವತಿಯರ ಹೆಸರುಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ, ಜಿಲ್ಲಾ ಬಿಜೆಪಿ ಸಾಮಾಜಿಕ ಘಟಕದ ಸಂಚಾಲಕ, ಬಾಲಾಜಿ ಶ್ರೀನಿವಾಸ್, ಬಿಜೆಪಿಯ ಸಾಮಾಜಿಕ ಮಾಧ್ಯಮದ ಸಕ್ರಿಯ ಕಾರ್ಯಕರ್ತರ ಬೃಹತ್ ಮೇಳವನ್ನು ಆಯೋಜಿಸಲಿದ್ದು, ಆಗಸ್ಟ್ 6ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ. ಇಲ್ಲಿಯವರೆಗೆ 12,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೆಸರು ದಾಖಲು ಮಾಡಿಕೊಂಡಿದ್ದಾರೆ. ಸುಮಾರು 6,000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಬಾಲಾಜಿ ಶ್ರೀನಿವಾಸ್ ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos