ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆ 
ರಾಜ್ಯ

ಸೆಪ್ಟೆಂಬರ್ 21 ರಿಂದ 30ರವರೆಗೆ ಸರಳ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ

ಪ್ರಸಕ್ತ ಸಾಲಿನ ಮೈಸೂರು ದಸರಾ ಉತ್ಸವವನ್ನು ಸೆಪ್ಟೆಂಬರ್ 21 ರಿಂದ 30ರವರೆಗೆ ಸರಳ-ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಉತ್ಸವವನ್ನು ಸೆಪ್ಟೆಂಬರ್ 21 ರಿಂದ 30ರವರೆಗೆ ಸರಳ-ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಒಟ್ಟು 15 ಕೋಟಿ ಅನುದಾನ ನೀಡಲು ನಿರ್ಧರಿಸಿದ್ದು, ಸೆಪ್ಟೆಂಬರ್ 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸರಳ ಹಾಗೂ ವಿಜೃಂಭಣೆಯಿಂದ  ದಸರಾ ಆಚರಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ವರ್ಷದ ದಸರಾ ಉತ್ಸವಕ್ಕೆ ಸರ್ಕಾರದಿಂದ ರು.15 ಕೋಟಿ ಅನುದಾನ ನಿಗದಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ದಸರಾ ಆಚರಣೆ 2017 ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸೆ.21ರಂದು ಬೆಳಗ್ಗೆ ದಸರಾ ಉದ್ಘಾಟನೆಯಾಗಲಿದ್ದು,  ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೂ ಅಂದೇ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಅಂತೆಯೇ ನವರಾತ್ರಿಯು ಸೆ.29ರಂದು ಅಂತ್ಯಗೊಳ್ಳುತ್ತದೆ. ವಿಜಯ ದಶಮಿ ಅಂಗವಾಗಿ  ಸೆ.30ರಂದು ಮಧ್ಯಾಹ್ನ 1.15 ಕ್ಕೆ ನಂದಿ ಪೂಜೆ, 3.15ಕ್ಕೆ  ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.

ಇನ್ನು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಹಾಗೂ ಉಪಾಧ್ಯಕ್ಷರನ್ನಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು   ನೇಮಕ ಮಾಡಲಾಗಿದೆ. ಇವರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನು  ಸದಸ್ಯರನ್ನಾಗಿ ಮಾಡಲಾಗಿದೆ ಎಂದು  ಸಿದ್ದರಾಮಯ್ಯ ತಿಳಿಸಿದರು.

ದಸರಾ ಉತ್ಸವದ ಪ್ರಚಾರದ ಉಸ್ತುವಾರಿಯನ್ನು ಪ್ರಿಯಾಂಕ್ ಖರ್ಗೆಗೆ ವಹಿಸಲಾಗಿದ್ದು, ಈ ಬಾರಿ ಜಿಲ್ಲಾ ಪಂಚಾಯತ್ ಗಳ ಮಳಿಗೆಗಳನ್ನು ತೆರೆಯುವ ಬದಲು, ರಾಜ್ಯ ಸರ್ಕಾರದ ಪ್ರಮುಖ 15-30 ಇಲಾಖೆಗಳ ಸಾಧನೆಗಳು,  ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ದಸರಾ ಮಹೋತ್ಸವವು ಸುಂದರ, ಆಕರ್ಷಕ, ಸಾಂಪ್ರದಾಯಿಕವಾಗಿ ನಮ್ಮ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ  ಇರಬೇಕು. ದೇಶ ವಿದೇಶಗಳಿಂದ ಬರುವ ಜನರಿಗೆ ಹೆಚ್ಚು ಆಕರ್ಷಣೀಯವಾಗಿ ದಸರಾ ಕಾಣುವಂತೆ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ದಸರೆಗೆ ಗುಂಡಿ ಮುಕ್ತ ರಸ್ತೆ ಸಿದ್ಧಪಡಿಸಲು ಸಿಎಂ ಸೂಚನೆ
ಇದೇ ವೇಳೆ ಜಂಬೂ ಸವಾರಿ ಹಾದು ಹೋಗುವ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಮಾಡಲಾಗಿದೆ. ಮೈಸೂರಿನ ಇತರೆ ರಸ್ತೆಗಳನ್ನು ದಸರಾ ಆರಂಭವಾಗುವುದಕ್ಕಿಂತ ಮುಂಚೆ ಗುಂಡಿ ಮುಕ್ತ ರಸ್ತೆಗಳನ್ನಾಗಿ ಅಭಿವೃದ್ಧಿ  ಪಡಿಸುವಂತೆ ಮೈಸೂರು ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದಸರಾ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ. ರಾಜ್ಯದ ಕಲಾ ತಂಡಗಳೊಂದಿಗೆ,  ಬೇರೆ ರಾಜ್ಯಗಳ ವಿಶಿಷ್ಟ ಕಲಾ ತಂಡಗಳನ್ನು ಸೇರಿಸಿಕೊಳ್ಳುವಂತೆ ಹೇಳಿದ್ದೇನೆ. ಮೆರವಣಿಗೆ ಆಕರ್ಷಕವಾಗಿರಬೇಕು. ನಮ್ಮ ನಾಡು ಹಾಗೂ ದೇಶದ ಸಂಸ್ಕೃತಿ ಬಿಂಬಿಸುವಂತಿರಬೇಕು ಎಂದು ಅವರು ತಿಳಿಸಿದರು.

ಕಳೆದ ಬಾರಿ ದಸರಾ ಆಚರಣೆಗೆ 13.25 ಕೋಟಿ ರು.ಗಳನ್ನು ಒದಗಿಸಲಾಗಿತ್ತು. ಈ ಬಾರಿ 15 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗುವುದು. ಈಗಾಗಲೇ 10.90 ಕೋಟಿ ರು.ಗಳನ್ನು ಉತ್ಸವಕ್ಕೆ ಮೀಸಲಿರಿಸಲಾಗಿದ್ದು, ಉಳಿದ ಹಣ  ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ಸೂಚಿಸಲಾಗಿದೆ. ಸೆ.27ರಂದು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಇದ್ದು, ಅದನ್ನು ಮೈಸೂರಿನಲ್ಲಿ ದಸರಾ ಸಂದರ್ಭದಲ್ಲೇ ಆಚರಿಸಲಾಗುತ್ತದೆ. ನಾಡಹಬ್ಬ ಮೈಸೂರು  ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬ ಜವಾಬ್ದಾರಿಯನ್ನು ಉನ್ನತಮಟ್ಟದ ಸಮಿತಿ ನನಗೆ ನೀಡಿದೆ. ಹೀಗಾಗಿ 8ರಿಂದ 10 ಹೆಸರು ನಮ್ಮ ಪರಿಶೀಲನೆಯಲ್ಲಿದ್ದು, ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು  ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT