ತುಮಕೂರು: ಬರುವ ಡಿಸೆಂಬರ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಸೇರುವುದಾಗಿ ಜೆಡಿಎಸ್ ನ ಬಂಡಾಯ ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ನಿನ್ನೆ ಅವರು ತುಮಕೂರಿನ ಮಾಜಿ ಶಾಸಕ ಎಚ್.ನಿಂಗಪ್ಪ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಆ ಪಕ್ಷಕ್ಕೆ ಸೇರಲು ಒಪ್ಪಿಗೆ ಸಿಕ್ಕಿದೆ. ತಮ್ಮ ಜೊತೆಗೆ ಜೆಡಿಎಸ್ ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದರು.
ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ತನ್ನ ರುಂಡ ಕತ್ತರಿಸಿ ಇಡುತ್ತೇನೆ ಎಂದು ಮೊನ್ನೆಯಷ್ಟೇ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸವಾಲೆಸೆದಿದ್ದರು.