ಬೆಂಗಳೂರು: ಮುಂದಿನ 28 ಭಾನುವಾರಗಳಂದು ರಾಜ್ಯ ಸರ್ಕಾರಿ ಪಿಯುಸಿ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳು ಕಡ್ಡಾಯವಾಗಿ ಇಂಗ್ಲಿಷ್ ತರಬೇತಿ ತರಗತಿಗಳಲ್ಲಿ ಭಾಗವಹಿಸಬೇಕು. ತರಗತಿಗಳು ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಬಯೋ ಮೆಟ್ರಿಕ್ ವ್ಯವಸ್ಥೆ ಮೂಲಕ ಹಾಜರಾತಿ ದಾಖಲು ನೀಡಲಾಗುತ್ತದೆ.
ಪದವಿಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ಅಧಿಕೃತ ಸುತ್ತೋಲೆ ಪ್ರಕಾರ. ಜುಲೈ 30ರಿಂದ ಪ್ರತಿ ಭಾನುವಾರ ಮೂರು ಗಂಟೆಗಳ ಕಾಲ ತರಗತಿಗಳು ನಡೆಯುತ್ತವೆ.
ಪಿಯುಸಿ ವಿದ್ಯಾರ್ಥಿಗಳ ವ್ಯಾಕರಣ ಮತ್ತು ಸಂವಹನ ಕಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ವಿಶೇಷ ತರಗತಿಗಳನ್ನು ಶಿಕ್ಷಣ ಇಲಾಖೆ ಹಮ್ಮಿಕೊಂಡಿದೆ. ಇದರಿಂದ ಮುಂದೆ ನೀಟ್ ಮತ್ತು ಜೆಇಇ ಪರೀಕ್ಷೆ ತೆಗೆದುಕೊಳ್ಳುವ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಪ್ರಕಾರ, ಜನವರಿ 2018ರವರೆಗೆ ವಿಶೇಷ ಇಂಗ್ಲಿಷ್ ತರಗತಿಗಳನ್ನು ನಡೆಸಲಾಗುತ್ತದೆ. ಇಲಾಖೆಯಲ್ಲಿ ಸಿಕ್ಕಿರುವ ಮಾಹಿತಿ ಪ್ರಕಾರ, ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ರಾಜ್ಯ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳ ಸಾಧನೆ ಅಷ್ಟಾಗಿ ಇಲ್ಲ. ಹೀಗಾಗಿ, ಇಲಾಖೆ ವಿಶೇಷ ಇಂಗ್ಲೀಷ್ ತರಗತಿಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಹೇಳಿದರು.