ಕರ್ನಾಟಕ ಹೈಕೋರ್ಟ್ 
ರಾಜ್ಯ

ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯಿದೆ: ಪ್ರಾಥಮಿಕ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್

ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯಿದೆಗೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ...

ಬೆಂಗಳೂರು: ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯಿದೆಗೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ನೋಟಿಸ್ ನೀಡಿದೆ.
1983ರ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ಮಾಡಿ ಕರ್ನಾಟಕ ಶಿಕ್ಷಣ 2017 ಕಾಯಿದೆಯನ್ನು ಸರ್ಕಾರ ಏಪ್ರಿಲ್ ನಲ್ಲಿ ಜಾರಿಗೊಳಿಸಿತ್ತು. ಇದರ ಅನ್ವಯ ಶಾಲಾ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಸೇರಿದಂತೆ ಯಾವುದೇ ವಿಷಯಗಳಲ್ಲಿ ಸಮಸ್ಯೆಯಾಗದಂತೆ ನಿಗಾ ಇಡಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗಿದೆ.
ಖಾಸಗಿ ಶಾಲೆಗಳು ನಿಯಮಾವಳಿ ಪಾಲಿಸದಿದ್ದಲ್ಲಿ, ಸಂಬಂಧಪಟ್ಟ ಶಾಲೆಗೆ 10 ಲಕ್ಷ ರು. ದಂಡ ವಿಧಿಸುವ ಅಧಿಕಾರ ಹೊಂದಿದೆ, ಅದೇ ರೀತಿ ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಸಿದಂತೆ ಸೋಪ ಕಂಡು ಬಂದರೆ ಸಂಸ್ಥೆಯ ಆಡಳಿತ ಮಂಡಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ 6 ತಿಂಗಳು ಜೈಲು ಹಾಗೂ 1 ಲಕ್ಷ ರು ದಂಡ ವಿಧಿಸಬಹುದಾಗಿದೆ.
ರಾಜ್ಯ ಸರ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಜರುಗಿಸುವ ಯಾವುದೇ ಅಧಿಕಾರವಿಲ್ಲ, ರಾಜ್ಯ ಸರ್ಕಾರದ 2017ರ ತಿದ್ದುಪಡಿ ಕಾಯಿದೆ ನಿಯಮಗಳು ಸಂವಿಧಾನ ಬಾಹಿರವಾಗಿದ್ದು, ತಡೆ ನೀಡುವಂತೆ ಕೋರಿ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರಿದ್ದ ಏಕಸದಸ್ಯ ಪೀಠ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಈ ಸಂಬಂಧ ನೊಟೀಸ್ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT